ನವದೆಹಲಿ:ಐಪಿಎಲ್ ಇತಿಹಾಸದಲ್ಲಿ ಬಲಿಷ್ಠ ತಂಡವೆಂದು ಕರೆಸಿಕೊಳ್ಳುವ ಚೆನ್ನೈ ತಂಡ ಬ್ಯಾಟಿಂಗ್ ವೈಫಲ್ಯದಿಂದ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಸಿಎಸ್ಕೆ ಆಟಗಾರರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.
ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ತಂಡ 44 ರನ್ಗಳ ಅಂತರದಲ್ಲಿ ಸೋಲು ಕಂಡಿದ್ದು, ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಚೆನ್ನೈ ತಂಡದ ಬ್ಯಾಟ್ಸ್ಮನ್ಗಳ ಕಾಲೆಳೆದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಸರಿಯಾಗಿ ಆಡುತ್ತಿಲ್ಲ. ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಬರುವುದಕ್ಕೂ ಮೊದಲು ಅವರು ಗ್ಲೂಕೋಸ್ ತೆಗೆದುಕೊಂಡು ಬರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 20 ಓವರ್ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 175 ರನ್ ಪೇರಿಸಿತು. ಮರುತ್ತರವಾಗಿ ಬ್ಯಾಟಿಂಗ್ ನಡೆಸಿದ ಚೆನ್ನೈ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿ 44 ರನ್ಗಳಿಂದ ಸೋಲು ಕಂಡಿತು. ಇದಕ್ಕೂ ಮೊದಲು ರಾಜಸ್ಥಾನ ವಿರುದ್ಧ ಕೂಡ 16 ರನ್ಗಳಿಂದ ಸೋಲು ಕಂಡಿತ್ತು.