ಕರ್ನಾಟಕ

karnataka

ETV Bharat / sports

ಡೆಲ್ಲಿಗೆ ಸಿಎಸ್​ಕೆ ಸವಾಲು: ಕ್ಯಾಪಿಟಲ್ಸ್​ ವಿರುದ್ಧ ಜಯ ಸಾಧಿಸಿಸುತ್ತಾ ಸೂಪರ್ ಕಿಂಗ್ಸ್? - ಡೆಲ್ಲಿ ಚೆನ್ನೈ ಪಂದ್ಯ

ಶಾರ್ಜಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ​ಲೀಗ್​ನ 34ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

Chennai eye another all-round show
ಡೆಲ್ಲಿಗೆ ಸಿಎಸ್​ಕೆ ಸವಾಲು

By

Published : Oct 17, 2020, 11:44 AM IST

ಶಾರ್ಜಾ:ಇಂದು ಸಂಜೆ ನಡೆಯಲಿರುವ ಇಂಡಿಯನ್ ಪ್ರೀಮಿಯರ್​ಲೀಗ್​ನ 2ನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ತಂಡ ಚೆನ್ನೈ ಸೂಪರ್ ​ಕಿಂಗ್ಸ್​ ತಂಡವನ್ನು ಎದುರಿಸಲಿದೆ.

ಶ್ರೇಯಸ್ ಐಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್, ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದೆ. ಆಡಿದ 8 ಪಂದ್ಯಗಳ ಪೈಕಿ ಆರರಲ್ಲಿ ಜಯ ಸಾಧಿಸಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತ ಸಿಎಸ್​ಕೆ ತಂಡ 8ರಲ್ಲಿ 3 ಪಂದ್ಯ ಜಯಿಸಿದ್ದು, 5ರಲ್ಲಿ ಸೋಲು ಕಂಡಿದೆ.

ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ತಂಡ ಕಳೆದ ಪಂದ್ಯಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್ ಹತ್ತಿದೆ. ಹಲವು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ ಸಿಎಸ್​ಕೆ ಆಟಗಾರರು, ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸ್ಯಾಮ್ ಕರ್ರನ್​ ಭರವಸೆ ಮೂಡಿಸಿದ್ದಾರೆ.

ವಿಕೆಟ್ ಪಡೆದ ಸಂಭ್ರಮದಲ್ಲಿ ಸಿಎಸ್​ಕೆ ಆಟಗಾರರು

ಕಳೆದ ಪಂದ್ಯದಲ್ಲಿ ಸಿಎಸ್​ಕೆ ಬೌಲರ್ಸ್​ ಉತ್ತಮವಾಗಿ ಸ್ಪೆಲ್​ ಮಾಡಿದ್ರು. ಶಾರ್ದೂಲ್ ಠಾಕೂರ್, ಕರಣ ಶರ್ಮಾ, ಸ್ಯಾಮ್ ಕರ್ರನ್, ಜಡೇಜಾ, ಬ್ರಾವೋ ಉತ್ತಮ ಪ್ರದರ್ಶನ ನೀಡಿ ಕಡಿಮೆ ರನ್​ಗಳಿಗೆ ಹೈದರಾಬಾದ್ ಆಟಗಾರರನ್ನು ಕಟ್ಟಿಹಾಕಿದ್ರು.

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಡೆಲ್ಲಿ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಪೃಥ್ವಿ ಶಾ, ಶ್ರೇಯಸ್ ಐಯ್ಯರ್, ಶಿಖರ್ ಧವನ್, ಸ್ಟೊಯ್ನೀಸ್ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ತೋರಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಕ್ಯಾಪಿಟಲ್ಸ್ ಮೇಲುಗೈ ಹೊಂದಿದೆ. ಕಗಿಸೊ ರಬಾಡ, ಎನ್ರಿಚ್ ನೋರ್ಟ್ಜೆ, ಹರ್ಷಲ್​​ ಪಟೇಲ್ ಮತ್ತು ಸ್ಪಿನ್ನರ್‌ ಆರ್.ಅಶ್ವಿನ್, ಸ್ಟೋಯ್ನಿಸ್​ ಡೀಸೆಂಟ್ ಸ್ಪೆಲ್ ಮಾಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಯುವ ಬೌಲರ್ ತುಷಾರ್​ ದೇಶಪಾಂಡೆ ಕೂಡ ಮಿಂಚಿದ್ದರು.

ಉಭಯ ತಂಡಗಳು ಇಲ್ಲಿಯವರೆಗೆ 22 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 15 ಪಂದ್ಯಗಳಲ್ಲಿ ಸಿಎಸ್​ಕೆ ಗೆಲುವು ಸಾಧಿಸಿದ್ರೆ, 7 ಪಂದ್ಯಗಳಲ್ಲಿ ಡೆಲ್ಲಿ ಗೆಲುವು ಸಾಧಿಸಿದೆ.

ABOUT THE AUTHOR

...view details