ಕರ್ನಾಟಕ

karnataka

ETV Bharat / sports

ಡೆಲ್ಲಿ ತಂಡಕ್ಕೆ ದೊಡ್ಡ ಪೆಟ್ಟು: ರಿಷಭ್ ಪಂತ್​ಗೆ ಒಂದು ವಾರ ವಿಶ್ರಾಂತಿ

ರಾಜಸ್ಥಾನ ರಾಯಲ್ಸ್ ವಿರುದ್ಧದ ದೆಹಲಿಯ ಕೊನೆಯ ಪಂದ್ಯದಲ್ಲಿ ಕಗಿಸೊ ರಬಾಡಾ ಅವರ ಬೌಲಿಂಗ್‌ನಲ್ಲಿ ಕ್ಯಾಚ್ ಹಿಡಿಯುವಾಗ ಗಾಯಗೊಂಡ ರಿಷಭ್ ಪಂತ್​ಗೆ ವೈದ್ಯರು ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ.

ಡೆಲ್ಲಿ ತಂಡಕ್ಕೆ ದೊಡ್ಡ ಪೆಟ್ಟು
ಡೆಲ್ಲಿ ತಂಡಕ್ಕೆ ದೊಡ್ಡ ಪೆಟ್ಟು

By

Published : Oct 12, 2020, 7:54 AM IST

Updated : Oct 12, 2020, 8:43 AM IST

ಅಬುಧಾಬಿ: ವಿಕೆಟ್ ‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರಿಗೆ ಒಂದು ವಾರ ವಿಶ್ರಾಂತಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್​​ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.

ರಿಷಭ್ ಪಂತ್​ಗೆ ಒಂದು ವಾರ ವಿಶ್ರಾಂತಿ

ಕಳೆದ ಶುಕ್ರವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್​​ ಗಾಯಗೊಂಡಿದ್ದರು. ಭಾನುವಾರ ಮುಂಬೈ ಇಂಡಿಯನ್ಸ್​​ ವಿರುದ್ಧ ಸೋತ ಬಳಿಕ ಮಾತನಾಡಿರುವ ನಾಯಕ ಶ್ರೇಯಸ್​ ಅಯ್ಯರ್, ರಿಷಭ್​​ ಪಂತ್​​ ಯಾವಾಗ ಬರ್ತಾರೆ ಎಂಬುದು ನಮಗೆ ತಿಳಿದಿಲ್ಲ. ವೈದ್ಯರು ಅವರಿಗೆ ಒಂದು ವಾರ ವಿಶ್ರಾಂತಿ ಪಡೆಯಬೇಕು ಎಂದಿದ್ದಾರೆ. ಬಳಿಕ ಅವರು ಸಂಪೂರ್ಣವಾಗಿ ಗುಣಮುಖರಾಗಿ ಹಿಂತಿರುಗುತ್ತಾರೆಂದು ಭಾವಿಸುತ್ತೇವೆ ಎಂದು ಅಯ್ಯರ್ ಹೇಳಿದ್ದಾರೆ.

ಡೆಲ್ಲಿ ತಂಡಕ್ಕೆ ದೊಡ್ಡ ಪೆಟ್ಟು

ನಿನ್ನೆಯ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ, ನಾಯಕ ಶ್ರೇಯಸ್‌ ಅಯ್ಯರ್ (42) ಹಾಗೂ ಅನುಭವಿ ಶಿಖರ್ ಧವನ್‌ (69) ಅವರ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 162 ರನ್‌ ಗಳಿಸಿತ್ತು.

ಡೆಲ್ಲಿ ತಂಡಕ್ಕೆ ದೊಡ್ಡ ಪೆಟ್ಟು

ಗುರಿ ಬೆನ್ನತ್ತಿದ ಮುಂಬೈ ಪಡೆ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ (5) ವಿಕೆಟ್‌ ಕಳೆದುಕೊಂಡಿತು. ಆದರೆ ಕ್ವಿಂಟನ್‌ ಡಿ ಕಾಕ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿ, ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Last Updated : Oct 12, 2020, 8:43 AM IST

ABOUT THE AUTHOR

...view details