ಅಬುಧಾಬಿ: ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡ 48 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಅವರ ತಂಡವು ಮಾಡಿದ ಪ್ರಮುಖ ತಪ್ಪುಗಳಿಂದ ಪಂದ್ಯ ಸೋಲಬೇಕಾಯ್ತು ಎನ್ನಲಾಗುತ್ತಿದೆ.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಾಲ್ಕು ವಿಕೆಟ್ ಕಳೆದುಕೊಂಡ ನಂತರ 191 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಪಂಜಾಬ್ 143 ರನ್ ಗಳಿಸಿ 48 ರನ್ಗಳಿಂದ ಸೋಲುಕಂಡಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ
ಯುಎಇಯಲ್ಲಿ ಕಳೆದ ಕೆಲವು ಪಂದ್ಯಗಳಲ್ಲಿ, ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಮಾಡುವ ತಂಡಗಳು ಸೋತಿರುವುದು ಕಂಡುಬರುತ್ತದೆ. ಮೊದಲು ಬ್ಯಾಟಿಂಗ್ ಮಾಡಲು ಯಾವುದೇ ಒತ್ತಡವಿರುವುದಿಲ್ಲ, ಆಟಗಾರರು ಮುಕ್ತವಾಗಿ ಆಡುತ್ತಾರೆ. ಆಲ್ಲದೆ ಸ್ಲೋ ಪಿಚ್ಗಳಾಗಿರುವುದರಿಂದ ನಂತರ ಬ್ಯಾಟಿಂಗ್ ಮಾಡಿದ ತಂಡದ ರನ್ ಗಳಿಸಲು ಸಾಧ್ಯವಾಗುವುದಿಲ್ಲ.