ಅಬುಧಾಬಿ: ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಟಾಸ್ ಸೋತು ಬ್ಯಾಟಿಂಗ್ಗೆ ಇಳಿದಿದೆ. ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ.
ಸತತ 5 ಸೋಲುಗಳ ಬಳಿಕ 5 ಪಂದ್ಯ ಗೆದ್ದಿರುವ ಪಂಜಾಬ್ ಗೆಲುವಿನ ಲಯ ಮುಂದುವರಿಸುವ ವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್ ಎದುರು ಪಂಜಾಬ್ ಸುಲಭದ ಜಯ ದಾಖಲಿಸಿತ್ತು. ಕ್ರಿಸ್ ಗೇಲ್ 11ರ ಬಳಗದಲ್ಲಿ ಸ್ಥಾನ ಪಡೆದ ನಂತರ ತಂಡದ ಅದೃಷ್ಟವೇ ಬದಲಾಗಿದೆ. ಮಯಾಂಕ್ ಅಗರ್ವಾಲ್ ಅಲಭ್ಯತೆಯಲ್ಲಿ ಮಂದೀಪ್ ಸಿಂಗ್ ಉತ್ತಮ ಪ್ರದರ್ಶನ ತೋರುತ್ತಿರುವುದು ತಂಡಕ್ಕೆ ಮತ್ತಷ್ಟು ಬಲ ತುಂಬಿದಂತಾಗಿದೆ.
ಮೊಹಮ್ಮದ್ ಶಮಿ ಮತ್ತು ರವಿ ಬಿಷ್ಣೋಯಿ, ಎಂ.ಅಶ್ವಿನ್, ಅರ್ಷ್ದೀಪ್ ಸಿಂಗ್, ಕ್ರಿಸ್ ಜೋರ್ಡನ್ ಬೌಲಿಂಗ್ನಲ್ಲಿ ಕಮಾಲ್ ಮಾಡುತ್ತಿದ್ದು, ಪಂಜಾಬ್ಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ನೀರಸ ಪ್ರದರ್ಶನ...!
ಇತ್ತ ಬಲಿಷ್ಠ ಆಟಗಾರರನ್ನು ಹೊಂದಿದ್ದರೂ ನೀರಸ ಪ್ರದರ್ಶನದಿಂದಾಗಿ ರಾಜಸ್ಥಾನ ತಂಡ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಪ್ಲೇ ಆಫ್ ಹಂತಕ್ಕೇರಲು ಕೂದಲೆಳೆ ಅಂತರದ ಅವಕಾಶ ಹೊಂದಿದೆ. ರಾಜಸ್ಥಾನ ಕಳೆದ ಪಂದ್ಯದಲ್ಲಿ ಮುಂಬೈ ಎದುರು ಭರ್ಜರಿ ಜಯ ದಾಖಲಿಸಿತ್ತು. ಇಂದಿನ ಪಂದ್ಯ ರಾಜಸ್ಥಾನ ತಂಡಕ್ಕೆ ಬಹು ಮುಖ್ಯವಾಗಿದೆ. ಒಂದು ವೇಳೆ ಈ ಪಂದ್ಯ ಸೋತರೆ ಟೂರ್ನಿಯಿಂದ ಹೊರ ಬೀಳುವುದು ಬಹುತೇಕ ಖಚಿತವಾಗಿದೆ. ಬೌಲಿಂಗ್ನಲ್ಲಿ ರಾಯಲ್ಸ್ ಉತ್ತಮ ಪ್ರದರ್ಶನ ತೋರಿದೆ. ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ. ಆದ್ರೂ ಸಹ ಅದೃಷ್ಟ ಜೊತೆ ರಾಜಸ್ಥಾನ ಆಟವಾಗಿದೆ.