ದುಬೈ:ಇಂಡಿಯನ್ ಪ್ರೀಮಿಯರ್ ಲೀಗ್ನ 44ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.
ಕೊಹ್ಲಿ ನಾಯಕತ್ವದ ಬೆಂಗಳೂರು ತಂಡ ಆಡಿದ 10 ಪಂದ್ಯಗಳಲ್ಲಿ 7 ಪಂದ್ಯ ಜಯಿಸಿದ್ದು, 3 ಪಂದ್ಯದಲ್ಲಿ ಸೋಲು ಕಂಡಿದೆ. ಇತ್ತ ಚೆನ್ನೈ ತಂಡ ಆಡಿದ 11 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯಗಳಿಸಿದ್ದು, 8 ಪಂದ್ಯಗಳನ್ನು ಕೈಚೆಲ್ಲಿದೆ. ಆರ್‌ಸಿಬಿ ಪ್ಲೇಆಫ್ ಹಾದಿ ಬಹುತೇಕ ಹಾದಿ ಸುಗಮವಾಗಿದ್ದು, ಇಂದಿನ ಪಂದ್ಯ ಗೆದ್ದರೆ ನಾಕೌಟ್‌ಗೆ ಅಧಿಕೃತವಾಗಿ ಪ್ರವೇಶ ಮಾಡಲಿದೆ. ಆದರೆ, ಚೆನ್ನೈ ಈಗಾಗಲೇ ನಾಕೌಟ್ ಹಂತದಿಂದ ಹೊರಬಿದ್ದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಆರ್‌ಸಿಬಿ ಬಲಿಷ್ಠವಾಗಿದೆ. ಆರಂಭಿಕ ಆಟಗಾರರಾದ ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕ್ರಿಸ್ ಮೋರಿಸ್ ಹೊಸ ಭರವಸೆ ಮೂಡಿಸಿದ್ದಾರೆ.
ಬೌಲಿಂಗ್‌ಲ್ಲೂ ಬೆಂಗಳೂರು ಬಲಿಷ್ಠವಾಗಿದ್ದು, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಾಲ್ ಸ್ಪಿನ್ ವರ್ಕೌಟ್ ಆಗುತ್ತಿದೆ. ಸೈನಿ, ಉದಾನ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವೇಗಿ ಕ್ರಿಸ್ ಮೋರಿಸ್ ಬೆಂಗಳೂರು ತಂಡದ ಬೌಲಿಂಗ್ನ ಶಕ್ತಿಯಾಗಿದ್ದಾರೆ. ಕಳೆದ ಪಂದ್ಯದಲ್ಲಿ ಮಿಂಚಿದ್ದ ಸಿರಾಜ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಸಿಎಸ್ಕೆ ಈ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದು, ಕಳೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು. ರೋಹಿತ್ ಪಡೆ ವಿರುದ್ಧ ಯಾವೊಬ್ಬ ಬ್ಯಾಟ್ಸ್ಮನ್ ಕೂಡ ಹೇಳಿಕೊಳ್ಳುವ ಪ್ರದರ್ಶನ ತೋರಿರಲಿಲ್ಲ. ಯುವ ಆಟಗಾರ ಸ್ಯಾಮ್ ಕರ್ರನ್ ಮಾತ್ರ ಅರ್ಧ ಶತಕ ಸಿಡಿಸಿದ್ರು.
ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಪಂದ್ಯದಲ್ಲಿ ಇಬ್ಬರು ಯುವ ಆಟಗಾರನನ್ನು ಕಣಕ್ಕೆ ಇಳಿಸಿತ್ತು. ಆದರೆ ಇಬ್ಬರೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಮುಂದಿನ ಪಂದ್ಯದಲ್ಲಿ ಇನ್ನಷ್ಟು ಯುವ ಆಟಗಾರರಿಗೆ ಅವಕಾಶ ನೀಡಲಾಗುವುದು ಎಂದು ಎಂ.ಎಸ್ ಧೋನಿ ತಿಳಿಸಿದ್ದರು. ಹಾಗಾಗಿ, ಅಂತಿಮ 11ರಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ.