ಶಾರ್ಜಾ:ರಾಜಸ್ಥಾನ್ ರಾಯಲ್ಸ್ ವಿರುದ್ಧ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್ ಆರೆಂಜ್ ಕ್ಯಾಪ್ ಮೇಲೆ ಹಿಡಿತ ಸಾಧಿಸಿದ್ದು, ಅದೇ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ಹೊಂದಿದ್ದಾರೆ.
ರಾಹುಲ್ ಇದುವರೆಗೆ ಮೂರು ಪಂದ್ಯಗಳಲ್ಲಿ 222 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ ಮತ್ತೊಂದು ಅರ್ಧಶತಕ ಸೇರಿದ್ದು, ಪ್ರಮುಖ ರನ್-ಸ್ಕೋರರ್‌ಗಳ ಪಟ್ಟಿಯಲ್ಲಿ ರಾಹುಲ್ ಅಗ್ರಸ್ಥಾನದಲ್ಲಿದ್ದಾರೆ. ಅದೇ ತಂಡದ ಮಯಾಂಕ್ ಅಗರ್ವಾಲ್ (ಮೂರು ಪಂದ್ಯಗಳಲ್ಲಿ 221 ರನ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ನ ಫಾಫ್ ಡು ಪ್ಲೆಸಿಸ್ (ಮೂರು ಪಂದ್ಯಗಳಲ್ಲಿ 173 ರನ್) ನಂತರದ ಸ್ಥಾನಗಳಲ್ಲಿದ್ದಾರೆ.