ಕರ್ನಾಟಕ

karnataka

ETV Bharat / sports

ಮುಂಬೈ ಮಣಿಸಿ ಪ್ಲೇ ಆಫ್​ ಸ್ಥಾನ ಕಾಯ್ದಿರಿಸುತ್ತಾ ಡೆಲ್ಲಿ?

ಆರಂಭದಲ್ಲಿ ಅಮೋಘ ಪ್ರದರ್ಶನದ ಮೂಲಕ ಬಲಿಷ್ಠ ತಂಡ ಎನಿಸಿಕೊಂಡಿದ್ದ ಡೆಲ್ಲಿ, ಹ್ಯಾಟ್ರಿಕ್ ಸೋಲುಗಳಿಂದ ಹಿನ್ನಡೆ ಅನುಭವಿಸಿದ್ದು ಪ್ಲೇ ಆಫ್​ ಸ್ಥಾನ ಖಚಿತಪಡಿಸಿಕೊಳ್ಳಲು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

By

Published : Oct 31, 2020, 11:27 AM IST

Updated : Oct 31, 2020, 12:07 PM IST

Mumbai Indians vs Delhi capitals
ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್

ದುಬೈ:ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ​ಲೀಗ್​ನ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಡೆಲ್ಲಿ, ಇಂದಿನ ಪಂದ್ಯಗಲ್ಲಿ ಗೆಲುವು ದಾಖಲಿಸಿದ್ರೆ ಪ್ಲೇ ಆಫ್​ ಸ್ಥಾನ ಖಚಿತವಾಗಲಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ತಂಡ 12 ಪಂದ್ಯಗಳಿಂದ 14 ಅಂಕ ಪಡೆದುಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇತ್ತ ಮುಂಬೈ ತಂಡ 12 ಪಂದ್ಯಗಳಿಂದ 16 ಅಂಕ ಪಡೆದು ಫ್ಲೆ ಆಫ್​ ಸ್ಥಾನ ಖಚಿತಪಡಿಸಿಕೊಂಡಿದೆ.

ಟೂರ್ನಿಯ ಆರಂಭದಲ್ಲಿ ಅಮೋಘ ಪ್ರದರ್ಶನದ ತೋರಿದ್ದ ಡೆಲ್ಲಿ ತಂಡ ಕಳೆದ 3 ಪಂದ್ಯಗಳಲ್ಲಿ ಸೋಲು ಕಂಡಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಕಳೆದ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಪ್ರಮುಖ ಬ್ಯಾಟ್ಸ್​ಮನ್​ಗಳ ವೈಫಲ್ಯ ತಂಡದ ಸೋಲಿಗೆ ಕಾರಣವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಕಳೆದ ಪಂದ್ಯದಲ್ಲಿ ಬೌಲರ್​ಗಳು ಕೂಡ ದುಬಾರಿಯಾಗಿದ್ದರು. ಅಯ್ಯರ್ ಪಡೆಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದ ಹೈದರಾಬಾದ್ ಬೃಹತ್ ಮೊತ್ತ ಪೇರಿಸಿತ್ತು. ಆದರೂ ಕ್ಯಾಪಿಟಲ್ಸ್ ಬೌಲಿಂಗ್ ಸಾಮರ್ಥ್ಯ ಅಲ್ಲಗಳೆಯುವಂತಿಲ್ಲ. ಕಗಿಸೊ ರಬಾಡ, ನೋರ್ಟ್ಜೆ, ಅಕ್ಸರ್​​ ಪಟೇಲ್, ಆರ್.ಅಶ್ವಿನ್, ಸ್ಟೋಯ್ನಿಸ್​ ಎದುರಾಳಿಗಳನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ

ಇತ್ತ ಮುಂಬೈ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಬಗ್ಗೆ ಯಾವುದೇ ಅನುಮಾನ ಇಲ್ಲ. ಸಂಘಟಿತ ಪ್ರದರ್ಶನದಿಂದಾಗಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಡಿ ಕಾಕ್, ಸೂರ್ಯಕುಮಾರ್ ಯಾದವ್, ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮುಂಬೈನ ಬ್ಯಾಟಿಂಗ್ ಬಲ. ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ, ಟ್ರೆಂಟ್‌ ಬೌಲ್ಟ್, ಜೇಮ್ಸ್‌ ಪ್ಯಾಟಿನ್ಸನ್‌, ರಾಹುಲ್‌ ಚಹಾರ್‌ ಅದ್ಭುತವಾಗಿ ಸ್ಪೆಲ್​ ಮಾಡುತ್ತಿದ್ದಾರೆ.

ಉಭಯ ತಂಡಗಳು ಇಲ್ಲಿಯವರೆಗೆ 25 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 13 ಪಂದ್ಯಗಳಲ್ಲಿ ಮುಂಬೈ ತಂಡ ಗೆಲುವು ಕಂಡಿದ್ರೆ, 12 ಪಂದ್ಯಗಳಲ್ಲಿ ಡೆಲ್ಲಿ ತಂಡ ಜಯ ಸಾಧಿಸಿದೆ.

Last Updated : Oct 31, 2020, 12:07 PM IST

ABOUT THE AUTHOR

...view details