ಶಾರ್ಜಾ: ಕಳೆದ ಎರಡು ಪಂದ್ಯಗಳಲ್ಲಿ ಸೋಲು ಕಂಡ ಪರಿಣಾಮ ಪ್ಲೇ ಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳದ ಆರ್ಸಿಬಿ ತಂಡ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದ್ದು, ಎರಡೂ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ರೆ, 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಹೈದರಾಬಾದ್ ತಂಡ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಿದೆ.
ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಫಿಂಚ್ ಬಲಿಗೆ ಕಣಕ್ಕಿಳಿದಿದ್ದ ಜೋಶ್ ಫಿಲಿಪ್ಪೆ ಹೊಸ ಭರವಸೆ ಮೂಡಿಸಿದ್ದಾರೆ. ಆದರ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ವೈಫಲ್ಯದಿಂದ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಲಾಗಿತ್ತು. ಇಂದಿನ ಪಂದ್ಯದಲ್ಲಿ ಕ್ರಿಸ್ ಮೋರಿಸ್ ಮತ್ತು ಶಿವಂ ದುಬೆ ಬ್ಯಾಟಿಂಗ್ನಲ್ಲಿ ಮಿಂಚಬೇಕಿದೆ.
ಆರ್ಸಿಬಿ ಬೌಲಿಂಗ್ ಮತ್ತಷ್ಟು ಚುರುಕಾಗಬೇಕಿದೆ, ಡೇಲ್ ಸ್ಟೈನ್ ದುಬಾರಿಯಾಗಿದ್ದು ತಂಡಕ್ಕೆ ಹಿನ್ನಡೆಯಾಗಿದೆ. ಕ್ರಿಸ್ ಮೋರಿಸ್, ಚಹಾಲ್ ಮತ್ತು ವಾಷಿಂಗ್ಟನ್ ಸುಂದರ್ ಇಂದಿನ ಪಂದ್ಯದಲ್ಲಿ ಮಿಂಚಿದ್ರೆ ಆರ್ಸಿಬಿ ಗೆಲುವು ಕಷ್ಟವೇನಲ್ಲ.