ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್‌ನಲ್ಲಿ 9,000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ಮೈಲಿಗಲ್ಲು ತಲುಪಿದ್ದು, ತಮ್ಮ 286ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.