ಹೈದರಾಬಾದ್: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ನಿಕೋಲಸ್ ಪೂರನ್ರನ್ನು ಯುವರಾಜ್ ಸಿಂಗ್ ಕೊಂಡಾಡಿದ್ದಾರೆ.
ಈತ ಪಂಜಾಬ್ ತಂಡದ ಗೇಮ್ ಚೇಂಜರ್ ಎಂದ ಯುವರಾಜ್ ಸಿಂಗ್ - ಯುವರಾಜ್ ಸಿಂಗ್
ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ನಿಕೋಲಸ್ ಪೂರನ್ ಪಂಜಾಬ್ ತಂಡದ ಗೇಮ್ ಚೇಂಜರ್ ಎಂದು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ತಂಡದ ಗೇಮ್ ಚೇಂಜರ್
ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮಿಂಚಿದ ಪೂರನ್ ಸ್ಫೋಟಕ ಬ್ಯಾಟಿಂಗ್ನಿಂದ 53 ರನ್ ಸಿಡಿಸಿ ಪಂಜಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪೂರನ್ ಅವರ ಸ್ಫೋಟಕ ಇನ್ನಿಂಗ್ಸ್ ಬಗ್ಗೆ ಮೆಚ್ಚುಗೆ ಸೂಚಿಸಿರುವ ಯುವಿ, ಆತ ಪಂಜಾಬ್ ತಂಡದ ನಿರ್ಣಾಯಕ ಆಟಗಾರ ಎಂದಿದ್ದಾರೆ.
ಸತತ ಸೋಲುಗಳಿಂದ ಕಂಗೆಟ್ಟಿದ್ದ ಪಂಜಾಬ್ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಅಂಕಪಟ್ಟಿಯ ಅಗ್ರ ಮೂರು ಸ್ಥಾನದಲ್ಲಿರುವ ಡೆಲ್ಲಿ, ಆರ್ಸಿಬಿ ಮತ್ತು ಮುಂಬೈ ತಂಡಗಳನ್ನು ಸೋಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದು, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.