ಕರ್ನಾಟಕ

karnataka

ETV Bharat / sports

ಕ್ಯಾಪಿಟಲ್ಸ್​ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ... 3 ವಿದೇಶಿ ಆಟಗಾರರೊಡನೆ ಕಣಕ್ಕೆ! - ​ ಡೆಲ್ಲಿ vs ಮುಂಬೈ ಲೈವ್ ಸ್ಕೋರ್

ತಲಾ ಒಂದು ಸೋಲು ಮತ್ತು 2 ಜಯ ಸಾಧಿಸಿರುವ ಮುಂಬೈ ಮತ್ತು ಡೆಲ್ಲಿ ತಂಡಗಳು ಈ ಪಂದ್ಯದಲ್ಲಿ ಗೆದ್ದರೆ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಹೊಂದಿವೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್

By

Published : Apr 20, 2021, 7:10 PM IST

ಚೆನ್ನೈ:ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ಆ್ಯಡಂ ಮಿಲ್ನೆ ಬದಲಿಗೆ ಜಯಂತ್ ಯಾದವ್​ಗೆ ಅವಕಾಶ ನೀಡಿದೆ. ಈ ಪಂದ್ಯದಲ್ಲಿ ಮೂರು ವಿದೇಶಿ ಆಟಗಾರರು ಮಾತ್ರ ಕಣಕ್ಕಿಳಿಯಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ 2 ಬದಲಾವಣೆಯಾಗಿದ್ದು, ಕ್ರಿಸ್​ ವೋಕ್ಸ್ ಬದಲಿಗೆ ಶಿಮ್ರಾನ್ ಹೆಟ್ಮೇಯರ್ ಮತ್ತು ಮೆರಿವಾಲಾ ಬದಲಿಗೆ ಅಮಿತ್ ಮಿಶ್ರಾ ತಂಡ ಸೇರಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ತಂಡ: ಶಿಖರ್ ಧವನ್, ಪೃಥ್ವಿ ಶಾ, ಸ್ಟೀವನ್ ಸ್ಮಿತ್, ರಿಷಭ್ ಪಂತ್, ಮಾರ್ಕಸ್ ಸ್ಟೊಯ್ನಿಸ್, ಲಲಿತ್ ಯಾದವ್, ಕ್ರಿಸ್ ವೋಕ್ಸ್, ಆರ್ ಅಶ್ವಿನ್, ಕಗಿಸೊ ರಬಡಾ, ಅವೇಶ್ ಖಾನ್, ಅಮಿತ್ ಮಿಶ್ರಾ

ಮುಂಬೈ ತಂಡ: ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹರ್, ಜಯಂತ್ ಯಾದವ್​, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

ABOUT THE AUTHOR

...view details