ಅಬು ಧಾಬಿ: ಪ್ಲೇ ಆಫ್ ತಲುಪಲು ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬಲಿಷ್ಠ ಮುಂಬೈ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮಂಗಳವಾರ ಆರ್ಸಿಬಿ ವಿರುದ್ಧ ಚೇಸ್ ಮಾಡಿ ಗೆದ್ದ ವಿಶ್ವಾಸದಲ್ಲಿರುವ ಕೆಕೆಆರ್ ತಂಡದ ನಾಯಕ ಇಂದೂ ಕೂಡ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಆಡಿದ ತಂಡವನ್ನೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿಸುತ್ತಿದೆ. ಪ್ರಸ್ತುತ ಕೆಕೆಆರ್ 6 ಅಂಕಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಇತ್ತ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಕಮ್ಬ್ಯಾಕ್ ಮಾಡಿದ್ದು ತಂಡದ ನೇತೃತ್ವವನ್ನು ವಹಿಸಿಕೊಂಡಿದ್ದಾರೆ.
ಮುಂಬೈ ತಂಡ ಆಡಿರುವ 8 ಪಂದ್ಯಗಳಲ್ಲಿ ತಲಾ 4 ಗೆಲುವು ಮತ್ತು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯವನ್ನು ಗೆದ್ದು ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗುವ ಆಲೋಚನೆಯಲ್ಲಿದೆ.