ಮುಂಬೈ:ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ಗೋಸ್ಕರ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮೋರಿಸ್ ಅತಿ ಹೆಚ್ಚಿನ ಬೆಲೆಗೆ ಹರಾಜುಗೊಂಡು ದಾಖಲೆ ನಿರ್ಮಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡ ಬರೋಬ್ಬರಿ 16.25 ಕೋಟಿ ರೂ. ನೀಡಿ ಖರೀದಿ ಮಾಡಿದೆ.
ಆದರೆ, ಇದೀಗ ನಡೆಯುತ್ತಿರುವ ಐಪಿಎಲ್ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಇಂಗ್ಲೆಂಡ್ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮೋರಿಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಐಪಿಎಲ್ ಹರಾಜಿನಲ್ಲಿ ಮೋರಿಸ್ ಖರೀದಿಸಿದ ಬೆಲೆಗೆ ಯೋಗ್ಯನಲ್ಲ ಎಂದಿದ್ದಾರೆ. ಅತಿ ಹೆಚ್ಚಿನ ಬೆಲೆಗೆ ಬಿಕರಿಯಾಗಿರುವ ಕಾರಣ ಅವರ ಮೇಲೆ ಹೆಚ್ಚಿನ ಒತ್ತಡವಿದೆ. ಆದರೆ ಹೇಳಿಕೊಳ್ಳುವಂತಹ ಪ್ರದರ್ಶನ ಅವರಿಂದ ಮೂಡಿ ಬರುತ್ತಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.