ಅಬು ಧಾಬಿ: ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ 4ಕ್ಕೆ ಪ್ರವೇಶಿಸುವ ಆಶಯದಲ್ಲಿರುವ ರಾಜಸ್ಥಾನ್ ರಾಯಲ್ಸ್ ಬಲಿಷ್ಠ ಡೆಲ್ಲಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂದಿನ ಪಂದ್ಯದಲ್ಲಿ ಸ್ಟಾರ್ ಓಪನರ್ ಎವಿನ್ ಲೂಯಿಸ್ ಹಾಗೂ ಆಲ್ರೌಂಡರ್ ಕ್ರಿಸ್ ಮೋರಿಸ್ ಹೊರಗುಳಿಯಲಿದ್ದು, ಇವರ ಸ್ಥಾನಕ್ಕೆ ಡೇವಿಡ್ ಮಿಲ್ಲರ್ ಮತ್ತು ತಬ್ರೈಜ್ ಶಂಸಿ ಕಣಕ್ಕಿಳಿಯುತ್ತಿದ್ದಾರೆ.
ಡೆಲ್ಲಿ ತಂಡದಲ್ಲಿ ಗಾಯಗೊಂಡಿರುವ ಮಾರ್ಕಸ್ ಸ್ಟೋಯ್ನಿಸ್ ಬದಲಿಗೆ ಆಲ್ರೌಂಡರ್ ಲಲಿತ್ ಯಾದವ್ ಅವಕಾಶ ಪಡೆದಿದ್ದು, ಡೆಲ್ಲಿ ಕೇವಲ 3 ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ.
ರಾಜಸ್ಥಾನ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೈಜ್ ಶಂಸಿ
ದೆಹಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ವಿಕೀ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮಾಯಿರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಅನ್ರಿಚ್ ನಾರ್ಟ್ಜೆ, ಅವೇಶ್ ಖಾನ್