ಕರ್ನಾಟಕ

karnataka

ETV Bharat / sports

RCB vs RR: ರಾಜಸ್ಥಾನ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಬೆಂಗಳೂರು - ಆರ್‌ಸಿಬಿ ಸ್ಕ್ವಾಡ್ ಟುಡೇ

ಆರ್​ಸಿಬಿ ಪರ ಇಂಗ್ಲೆಂಡ್ ಪೇಸರ್​ ಜಾರ್ಜ್​ ಗಾರ್ಟನ್ ಐಪಿಎಲ್​ಗೆ ಪದಾರ್ಪಣೆ ಮಾಡಲಿದ್ದಾರೆ. ರಾಯಲ್ಸ್ ಪರ ಜಯದೇವ್​ ಉನಾದ್ಕಟ್​ ಬದಲಿಗೆ ಕಾರ್ತಿಕ್ ತ್ಯಾಗಿ ತಂಡಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ.

Royal Challengers Bangalore vs Rajasthan Royals
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್

By

Published : Sep 29, 2021, 7:11 PM IST

ದುಬೈ: ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತಕಾರಿ ಸೋಲುಣಿಸಿದ ವಿಶ್ವಾಸದಲ್ಲಿರುವ ಬೆಂಗಳೂರು ತಂಡ ಇಂದಿನ ಪಂದ್ಯವನ್ನು ಗೆದ್ದು ಪ್ಲೇ ಆಫ್​​ಗೆ ಮತ್ತಷ್ಟು ಹತ್ತಿರವಾಗುವ ಆಶಯದಲ್ಲಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್​ ರೇಸ್​ನಲ್ಲಿ ಉಳಿದುಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ರಾಯಲ್ಸ್ ಆಡಿರುವ ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಮತ್ತು 8 ಸೋಲು ಕಂಡು 7ನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದರಷ್ಟೇ ಪ್ಲೇ ಆಫ್​ ಆಸೆ ಜೀವಂತವಾಗಿ ಉಳಿದುಕೊಳ್ಳಲಿದೆ.

ಆರ್​ಸಿಬಿ ಪರ ಇಂಗ್ಲೆಂಡ್ ಪೇಸರ್​ ಜಾರ್ಜ್​ ಗಾರ್ಟನ್ ಐಪಿಎಲ್​ಗೆ ಪದಾರ್ಪಣೆ ಮಾಡಲಿದ್ದಾರೆ. ರಾಯಲ್ಸ್ ಪರ ಜಯದೇವ್​ ಉನಾದ್ಕಟ್​ ಬದಲಿಗೆ ಕಾರ್ತಿಕ್ ತ್ಯಾಗಿ ತಂಡಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ.

ರಾಜಸ್ಥಾನ ರಾಯಲ್ಸ್: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ಲಿಯಾಮ್ ಲಿವಿಂಗ್​ಸ್ಟೋನ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕಾರ್ ಭರತ್ (ವಿಕೀ), ಗ್ಲೇನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್

ABOUT THE AUTHOR

...view details