ಚೆನ್ನೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಸೂಪರ್ ಓವರ್‌ನಲ್ಲಿ ಬೈರ್‌ಸ್ಟೋವ್ ಅವರನ್ನು ಬಿಟ್ಟು ವಾರ್ನರ್ ಅರ್ಧಶತಕ ಸಿಡಿಸಿದ ದಣಿದಿದ್ದ ಕೇನ್ ವಿಲಿಯಮ್ಸನ್ ಜೊತೆಗೆ ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿತ್ತು. ಎರಡೂ ತಂಡಗಳು 159 ರನ್ಗಳಿಸಿದ್ದವು. ನಂತರ ನಡೆದ ಸೂಪರ್ ಓವರ್‌ನಲ್ಲಿ ಎಸ್ಆರ್ಹೆಚ್ ನೀಡಿದ 8 ರನ್ಗಳ ಗುರಿ ಯಶಸ್ವಿಯಾಗಿ ಬೆನ್ನಟ್ಟಿ ಡೆಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
ಆದರೆ, ಸೂಪರ್ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಸೋಲಿಗೆ ಸೂಪರ್ ಓವರ್‌ನಲ್ಲಿ ಬೈರ್‌ಸ್ಟೋವ್ ಕಡೆಗಣಿಸಿದ್ದೇ ಕಾರಣ ಎಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀಕಿಸಿದ್ದಾರೆ.