ಬೆಂಗಳೂರು:ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಮೆಗಾ ಹರಾಜಿನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಶ್ರೇಯಸ್ ಅಯ್ಯರ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಸುಮಾರು 12.5 ಕೋಟಿ ರೂಪಾಯಿಗೆ ಖರೀದಿಸಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕತ್ವದ ಹುಡುಕಾಟದಲ್ಲಿದ್ದು, ಶ್ರೇಯಸ್ ಅಯ್ಯರ್ ಆ ಸ್ಥಾನವನ್ನು ತುಂಬಲಿದ್ದಾರೆ ಎನ್ನಲಾಗುತ್ತಿದೆ.
ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಅವರನ್ನು ಪಂಜಾಬ್ ಕಿಂಗ್ಸ್ ಆಯ್ಕೆ ಮಾಡಿಕೊಂಡಿದ್ದು, ಸುಮಾರು 8.25 ಕೋಟಿ ರೂಪಾಯಿಗೆ ಶಿಖರ್ ಧವನ್ ಹರಾಜಾಗಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಎರಡೂ ಪ್ರಾಂಚೈಸಿಗಳು ಶಿಖರ್ ಧವನ್ ಅವರನ್ನು ಖರೀದಿಸಲು ಮುಂದಾಗಿದ್ದವು.