ಮುಂಬೈ:ಸತತ ಸೋಲುಗಳಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗೆಲುವು ಸಾಧಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಮತ್ತು ಆಲ್ರೌಂಡರ್ ಶಿವಂ ದುಬೆ ಅಬ್ಬರ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ 23 ರನ್ಗಳ ಅಂತರದಿಂದ ಗೆಲುವು ಸಾಧಿಸಿದೆ.
ಐಪಿಎಲ್ನ 15ನೇ ಆವೃತ್ತಿಯಲ್ಲಿ ಚೊಚ್ಚಲ ಗೆಲುವಿನ ಹುಡುಕಾಟದಲ್ಲಿದ್ದ ಚೆನ್ನೈ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದು, ರಾಬಿನ್ ಉತ್ತಪ್ಪ ರನ್ ಮತ್ತು ಶಿವಂ ದುಬೆ 95 ರನ್ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 217 ರನ್ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. 50 ಎಸೆತಗಳನ್ನು ಎದುರಿಸಿದ ಉತ್ತಪ್ಪ 4 ಬೌಂಡರಿ ಮತ್ತು 9 ಸಿಕ್ಸರ್ಗಳ ಸಹಿತ 88 ರನ್ಗಳಿಸಿದರೆ, ಶಿವಂ ದುಬೆ 45 ಎಸೆತಗಳಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್ಗಳ ಸಹಿತ ಅಜೇಯ 95 ರನ್ ಗಳಿಸಿದ್ದರು.
ಋತುರಾಜ್ ಗಾಯಕ್ವಾಡ್ 17 ರನ್, ಮೊಯಿನ್ ಅಲಿ 3 ರನ್ಗಳ ಮಾತ್ರ ಗಳಿಸಲು ಸಾಧ್ಯವಾಯಿತು. ರವೀಂದ್ರ ಜಡೇಡಾ ಮೊದಲ ಎಸೆತದಲ್ಲಿ ಔಟಾಗಿ ಪೆವಿಲಿಯನ್ಗೆ ಮರಳಿದ್ದು, ಕೊನೆಗೆ ಚೆನ್ನೈ ಸೂಪರ್ ಕಿಂಗ್ 4 ವಿಕೆಟ್ ನಷ್ಟಕ್ಕೆ 217 ರನ್ಗಳ ಗುರಿಯನ್ನು ನೀಡಲು ಸಾಧ್ಯವಾಯಿತು. ಬೆಂಗಳೂರು ತಂಡದ ಪರವಾಗಿ ಬೌಲಿಂಗ್ ಮಾಡಿದ ಬೌಲರ್ಗಳು ಚೆನ್ನೈ ಬೌಲರ್ಗಳನ್ನು ಕಟ್ಟಿಹಾಕುವಲ್ಲಿ ವಿಫಲರಾದರು. ವನಿಂದು ಹಸರಂಗ 2 ವಿಕೆಟ್ ಪಡೆದರೆ, ಜೋಷ್ ಹೇಜಲ್ವುಡ್ 1 ವಿಕೆಟ್ ಪಡೆಯಲು ಮಾತ್ರ ಸಾಧ್ಯವಾಯಿತು.