ಮುಂಬೈ: ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವೇಗವಾಗಿ 150 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಚಹಲ್ ಈ ವಿಶೇಷ ಮೈಲುಗಲ್ಲು ಸ್ಥಾಪಿಸಿದರು. ಭಾರತೀಯ ಸ್ಪಿನ್ನರ್ ಒಟ್ಟಾರೆ ಐಪಿಎಲ್ನಲ್ಲಿ ವೇಗವಾಗಿ ಈ ಸಾಧನೆ ಮಾಡಿದ 2ನೇ ಬೌಲರ್ ಎನಿಸಿಕೊಂಡರು. ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ್ ಮೊದಲ ಸ್ಥಾನದಲ್ಲಿದ್ದಾರೆ.
ಚಹಲ್ 118 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, 2ನೇ ಸ್ಥಾನದಲ್ಲಿರುವ ಅಮಿತ್ ಮಿಶ್ರಾ 140, ಪಿಯುಷ್ ಚಾವ್ಲಾ 156, ಹರ್ಭಜನ್ ಸಿಂಗ್ 159 ಪಂದ್ಯಗಳಲ್ಲಿ 150 ವಿಕೆಟ್ ಪಡೆದಿದ್ದಾರೆ. ವೇಗಿಗಳ ವಿಭಾಗದಲ್ಲಿ ಮಾಲಿಂಗ 105 ಪಂದ್ಯಗಳಲ್ಲಿ ಮತ್ತು ಡ್ವೇನ್ ಬ್ರಾವೋ137 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.