ಮುಂಬೈ: ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಗೆ ಮನವಿ ಮಾಡಿದೆ.
ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿ: ಇಂಗ್ಲೆಂಡ್ ಕ್ರಿಕೆಟ್‌ಗೆ ಬಿಸಿಸಿಐ ಮನವಿ - ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ
ಈಗಿನ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ 4ಕ್ಕೆ ಆರಂಭಗೊಳ್ಳುವ ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 14ಕ್ಕೆ ಕೊನೆಗೊಳ್ಳಲಿದೆ. ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ ಐಪಿಎಲ್‌ನ ಉಳಿದ ಪಂದ್ಯಗಳನ್ನು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಬಿಸಿಸಿಐ ಹೇಳುತ್ತಿದೆ.

ಈ ಮೂಲಕ ಕೋವಿಡ್ನಿಂದ ಮುಂದೂಡಲ್ಪಟ್ಟಿರುವ ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ನಲ್ಲಿ ನಡೆಸುವ ಯೋಜನೆಯನ್ನು ಬಿಸಿಸಿಐ ಹೊಂದಿದೆ.
ಈಗಿನ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ 4ಕ್ಕೆ ಆರಂಭಗೊಳ್ಳುವ ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 14ಕ್ಕೆ ಕೊನೆಗೊಳ್ಳಲಿದೆ. ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ ಐಪಿಎಲ್ ನಡೆಸಲು ಹೆಚ್ಚಿನ ಅನುಕೂಲವಾಗಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಐಸಿಸಿ ಟಿ-20 ವಿಶ್ವಕಪ್ ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ಭಾಗವಹಿಸಲು ತಂಡಗಳು ಭಾರತಕ್ಕೆ ಬರಲು ಪ್ರಾರಂಭಿಸುತ್ತವೆ. ಹಾಗಾಗಿ ಅಷ್ಟರೊಳಗೆ ಐಪಿಎಲ್ ಮುಗಿಸಬೇಕಿದೆ.