ಅಬುಧಾಬಿ: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 3 ವಿಕೆಟ್ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಐಪಿಎಲ್ ಇತಿಹಾಸದಲ್ಲಿ ಆವೃತ್ತಿಯೊಂದರಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾದರು.
ಹರ್ಷಲ್ ಈ ಆವೃತ್ತಿಯಲ್ಲಿ ಆಡಿರುವ 13 ಪಂದ್ಯಗಳಿಂದ 29 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಟೂರ್ನಿಯ ಮೊದಲ ಪಂದ್ಯದಿಂದ ಇಲ್ಲಿಯವರೆಗೂ ಪರ್ಪಲ್ ಕ್ಯಾಪ್ಅನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇದೀಗ ಹೈದರಾಬಾದ್ ವಿರುದ್ಧ 3 ವಿಕೆಟ್ ಪಡೆಯುತ್ತಿದ್ದಂತೆ ಜಸ್ಪ್ರೀತ್ ಬುಮ್ರಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.