ಮುಂಬೈ:ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ನಾಲ್ಕು ತಂಡಗಳು ಪ್ಲೇ-ಆಫ್ಗೆ ಲಗ್ಗೆ ಹಾಕಿವೆ. ಡೆಲ್ಲಿ ಕ್ಯಾಪಿಟಲ್ಸ್ ಸೋಲಿನಿಂದಾಗಿ 4ನೇ ತಂಡವಾಗಿ ಪ್ಲೇ-ಆಫ್ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿರುವ ಡುಪ್ಲೆಸಿಸ್ ಬಳಗ, ಅತ್ಯುತ್ತಮ ಪ್ರದರ್ಶನ ನೀಡುವ ಇರಾದೆ ಹೊಂದಿದೆ. ಈಗಾಗಲೇ ಉಳಿದ ತಂಡಗಳಿಗೆ ಆರ್ಸಿಬಿ ಭಯ ಶುರುವಾಗಿದೆ.
ಪ್ಲೇ-ಆಫ್ಗೆ ಗುಜರಾತ್ ಟೈಟನ್ಸ್, ರಾಜಸ್ಥಾನ ರಾಯಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ಲಗ್ಗೆ ಹಾಕಿದ್ದು, ಪ್ರಶಸ್ತಿಗೋಸ್ಕರ ಹೋರಾಟ ನಡೆಸುತ್ತಿವೆ. ಇದರ ಮಧ್ಯೆ ಟೀಂ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್, ಆರ್ಸಿಬಿ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.
ಟೀಂ ಇಂಡಿಯಾ ಮಾಜಿ ಬೌಲರ್ ಇರ್ಫಾನ್ ಪಠಾಣ್ ಸಂದರ್ಶನವೊಂದರಲ್ಲಿ ಭಾಗಿಯಾಗಿ ಮಾತನಾಡಿರುವ ಟೀಂ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್, ಡುಪ್ಲೆಸಿಸ್ ಮುಂದಾಳತ್ವದ ಆರ್ಸಿಬಿ ತಂಡ ಪ್ಲೇ-ಆಫ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದು, ಉಳಿದ ಮೂರು ತಂಡಗಳಿಗೆ ಬೆಂಗಳೂರು ತಂಡದ ಭಯ ಶುರುವಾಗಿದೆ ಎಂದಿದ್ದಾರೆ. ಕಳೆದ ಕೆಲ ಪಂದ್ಯಗಳಲ್ಲಿ ಆರ್ಸಿಬಿ, ಆಕ್ರಮಣಕಾರಿ ಆಟ ಪ್ರದರ್ಶಿಸಿದೆ. ಕೊನೆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫಾರ್ಮ್ಗೆ ಮರಳಿದ್ದು, ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಪರಿಣಮಿಸಿದೆ. ಉಳಿದಂತೆ ಮ್ಯಾಕ್ಸವೆಲ್, ಕಾರ್ತಿಕ್, ಡುಪ್ಲೆಸಿಸ್ ಉತ್ತಮವಾಗಿ ಬ್ಯಾಟ್ ಬೀಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಪಠಾಣ್ ತಿಳಿಸಿದ್ದಾರೆ. ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಿದ್ದು, ಹರ್ಷಲ್ ಪಟೇಲ್, ಹಸರಂಗ, ಮ್ಯಾಕ್ಸವೆಲ್ ಸೇರಿದಂತೆ ಅನೇಕರು ಮಾರಕ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.
ಇದನ್ನೂ ಓದಿ: ಈ ಸಲವೂ ಅವಕಾಶ ವಂಚಿತನಾದ ಅರ್ಜುನ್.. ಪುತ್ರನಿಗೆ ಸಚಿನ್ ತೆಂಡೂಲ್ಕರ್ ನೀಡಿರುವ ಸಲಹೆ ಏನು!?
ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಅನೇಕ ಏಳು-ಬೀಳಿನ ಮಧ್ಯೆ 16 ಪಾಯಿಂಟ್ ಗಳಿಸಿ ಆರ್ಸಿಬಿ ಪ್ಲೇ-ಆಫ್ಗೆ ಪ್ರವೇಶ ಪಡೆದುಕೊಂಡಿದೆ. ನಾಳೆ ಈಡನ್ ಗಾರ್ಡನ್ನಲ್ಲಿ ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ, ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಂದಿಗೆ ಕಣಕ್ಕಿಳಿಯಲಿದೆ.