ನವದೆಹಲಿ :ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡ ರೋಚಕ ಗೆಲುವು ಪಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ ಚೆನ್ನೈ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿತ್ತು. ಚೆನ್ನೈ ಈ ಬೃಹತ್ ಮೊತ್ತ ಗಳಿಸಲು ಪ್ರಮುಖ ಕಾರಣ ಅಂಬಟಿ ರಾಯುಡು.
ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಂಬಟಿ ರಾಯುಡು, ಅಬ್ಬರದ ಬ್ಯಾಟಿಂಗ್ ಮುಂದೆ ಮುಂಬೈ ಇಂಡಿಯನ್ಸ್ ಬೌಲರ್ಗಳು ದಿಕ್ಕು ತಪ್ಪಿದ್ದರು. ರಾಯುಡು ಕೇವಲ 27 ಎಸೆತಗಳಲ್ಲಿ 3 ಬೌಂಡರು 7 ಭರ್ಜರಿ ಸಿಕ್ಸರ್ ನೆರವಿನಿಂದ ಔಟಾಗದೆ 72 ರನ್ ಗಳಿಸಿ ಮಿಂಚಿದರು.