ಹೈದರಾಬಾದ್ :ಚೆನ್ನೈನ ಎಂ ಎ ಚಿದಬರಂ ಕ್ರಿಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಡೆಲ್ಲಿ ತಂಡ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಈ ಗೆಲುವಿಗೆ ಮೂಲ ಕಾರಣ ಅನುಭವಿ ಲೆಗ್ ಸ್ಪೀನ್ನರ್ ಅಮಿತ್ ಮಿಶ್ರಾ.
ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಮಿಶ್ರಾ ಈ ಪಂದ್ಯದಲ್ಲಿ ಫ್ಲಾಪ್ ಆಗಿದ್ದರು. ಇದಾದ ಬಳಿಕೆ ಡೆಲ್ಲಿ ತಂಡ ಮುಂದಿನ ಎರಡು ಪಂದ್ಯಗಳಿಗೆ ಅಮಿತ್ ಮಿಶ್ರಾರನ್ನ ಕೈಬಿಟ್ಟು ಬೆಂಚ್ ಕಾಯಿಸಿತ್ತು. ಆದರೆ, 4ನೇ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆದ ಮಿಶ್ರಾ ಭರ್ಜರಿ ಕಮ್ಬ್ಯಾಕ್ ಮಾಡಿದ್ದರು.
ಈ ಪಂದ್ಯದಲ್ಲಿ ಅಮಿತ್ ಮಿಶ್ರಾ ಪ್ರಮುಖ 4 ವಿಕೆಟ್ ಕಿತ್ತು ಮುಂಬೈ ಸೋಲಿಗೆ ಕಾರಣರಾಗಿದ್ದರು. ಈ ಪಂದ್ಯದಲ್ಲಿ 4 ವಿಕೆಟ್ ಪಡೆದ ಮಿಶ್ರಾ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆಯನ್ನ ತಮ್ಮ ಹೆಸರಿಗೆ ಬರೆದುಕೊಂಡರು.