ಕರ್ನಾಟಕ

karnataka

ETV Bharat / sports

ಇದು ಇಸಿಬಿ-ಬಿಸಿಸಿಐ ಸಂಬಂಧದ ಪರೀಕ್ಷೆ: ಹರ್ಷ ಭೋಗ್ಲೆ ಹೇಳಿದ್ದೇಕೆ? - ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ

ಐಪಿಎಲ್‌ನ ಉಳಿದಿರುವ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಸಾಧ್ಯವಾಗದಿದ್ದರೂ ಇಂಗ್ಲೆಂಡ್ ಮತ್ತು ಯುಎಇನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಹಾಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯನ್ನು ಮುಂಚಿತವಾಗಿಯೇ ನಡೆಸಲು ಬಿಸಿಸಿಐ, ಇಸಿಬಿಗೆ ಒತ್ತಾಯಿಸುತ್ತಿದೆ ಎಂಬ ಮಾಹಿತಿ ದೊರೆತಿದೆ.

ಹರ್ಷ ಭೋಗ್ಲೆ
ಹರ್ಷ ಭೋಗ್ಲೆ

By

Published : May 21, 2021, 10:22 AM IST

ಹೈದರಾಬಾದ್: ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸುವಂತೆ ಬಿಸಿಸಿಐ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ)ಗೆ ಮನವಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜನಪ್ರಿಯ ಕ್ರಿಕೆಟ್ ಕಮೆಂಟೇಟರ್ ಹರ್ಷ ಭೋಗ್ಲೆ, ಈ ಪರಿಸ್ಥಿತಿಯು ಎರಡು ಕ್ರಿಕೆಟ್ ಮಂಡಳಿಗಳ ನಡುವಿನ ನಿಕಟ ಸಂಬಂಧವನ್ನು ಪರೀಕ್ಷಿಸುತ್ತದೆ ಎಂದಿದ್ದಾರೆ.

ನಾಲ್ಕು ಫ್ರಾಂಚೈಸಿಗಳಲ್ಲಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಲ್ಲಿ ಕೋವಿಡ್ ತಗುಲಿದ ಕಾರಣ ಈ ಬಾರಿಯ ಐಪಿಎಲ್​ ಟೂರ್ನಿಯನ್ನು ಅನಿರ್ಧಾಷ್ಟವಧಿಗೆ ಮುಂದೂಡಲಾಗಿತ್ತು.

ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ, ಕೋವಿಡ್ನಿಂದ ಮುಂದೂಡಲ್ಪಟ್ಟಿರುವ ಈ ಬಾರಿಯ ಐಪಿಎಲ್​ ಟೂರ್ನಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್​ನಲ್ಲಿ ನಡೆಸಲು ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಬಿಸಿಸಿಐ, ಇಸಿಬಿಗೆ ಮನವಿ ಮಾಡಿದೆ ಎನ್ನಲಾಗಿದೆ.

ಐಪಿಎಲ್‌ನ ಉಳಿದಿರುವ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಸಾಧ್ಯವಾಗದಿದ್ದರೂ ಇಂಗ್ಲೆಂಡ್ ಮತ್ತು ಯುಎಇನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಹಾಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯನ್ನು ಮುಂಚಿತವಾಗಿಯೇ ನಡೆಸಲು ಬಿಸಿಸಿಐ, ಇಸಿಬಿಗೆ ಒತ್ತಾಯಿಸುತ್ತಿದೆ ಎಂಬ ಮಾಹಿತಿ ದೊರೆತಿದೆ.

ಈಗಿನ ವೇಳಾಪಟ್ಟಿಯ ಪ್ರಕಾರ, ಆಗಸ್ಟ್‌ 4ಕ್ಕೆ ಆರಂಭಗೊಳ್ಳುವ ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 14ಕ್ಕೆ ಕೊನೆಗೊಳ್ಳಲಿದೆ. ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ ಐಪಿಎಲ್ ನಡೆಸಲು ಹೆಚ್ಚಿನ ಅನುಕೂಲವಾಗಲಿದೆ. ಪಂದ್ಯಗಳ ನಂತರದ ನಡುವಿನ ಅಂತರವನ್ನು ಕಡಿಮೆ ಮಾಡಲು ಬಿಸಿಸಿಐ ಇಸಿಬಿಯನ್ನು ಕೇಳಿದೆ ಎನ್ನಲಾಗಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಐಸಿಸಿ ಟಿ-20 ವಿಶ್ವಕಪ್​ ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ಭಾಗವಹಿಸಲು ತಂಡಗಳು ಭಾರತಕ್ಕೆ ಬರಲು ಪ್ರಾರಂಭಿಸುತ್ತವೆ. ಹಾಗಾಗಿ ಅಷ್ಟರೊಳಗೆ ಐಪಿಎಲ್ ಮುಗಿಸಲು ಬಿಸಿಸಿಐ ಯೋಜನೆ ರೂಪಿಸಿದೆ.

For All Latest Updates

ABOUT THE AUTHOR

...view details