ದುಬೈ:14ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕಾಗಿ ವೇದಿಕೆ ಸಜ್ಜಾಗಿದ್ದು, ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಕಳೆದ ವರ್ಷ ಲೀಗ್ ಹಂತದಲ್ಲೇ ಹೊರಬಿದ್ದಿದ್ದ ಚೆನ್ನೈ ಅದ್ಭುತವಾಗಿ ಕಮ್ಬ್ಯಾಕ್ ಮಾಡಿ, ಮೊದಲ ತಂಡವಾಗಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದು, ಬಲಿಷ್ಠ ಆರ್ಸಿಬಿ ಹಾಗೂ ಡೆಲ್ಲಿ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಮಾರ್ಗನ್ ಪಡೆ 2014ರ ನಂತರ ಫೈನಲ್ಗೆ ಲಗ್ಗೆ ಹಾಕಿದೆ. ಹೀಗಾಗಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉಭಯ ತಂಡಗಳು ಇಲ್ಲಿಯವರೆಗೆ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಚೆನ್ನೈ 17 ಹಾಗೂ ಕೆಕೆಆರ್ 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. ವಿಶೇಷವೆಂದರೆ ಈ ಹಿಂದೆ ಎರಡು ಸಲ ಫೈನಲ್ಗೆ ಲಗ್ಗೆ ಹಾಕಿದ್ದ ಕೋಲ್ಕತ್ತಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2012ರಲ್ಲಿ ಗಂಭೀರ್ ನಾಯಕತ್ವದ ಕೋಲ್ಕತ್ತಾ ಪಡೆ ಸಿಎಸ್ಕೆಗೆ ಸೋಲುಣಿಸಿ ಚಾಂಪಿಯನ್ ಆಗಿತ್ತು. ಇದೀಗ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವ ಇರಾದೆಯಲ್ಲಿದೆ.