ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ವಾರ್ನರ್ ತಾವು ಎದುರಿಸಿದ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್ ಬಲೆಗೆ ಬಿದ್ದರು. ಈ ಮೂಲಕ 9 ವರ್ಷಗಳ ನಂತರ ಐಪಿಎಲ್ನಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ.
ನವೀ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ತಂಡದ ಲಿವಿಂಗ್ಸ್ಟೋನ್ ಎಸೆದ ಮೊದಲ ಎಸೆತದಲ್ಲೇ ಡೇವಿಡ್ ವಾರ್ನರ್ ರಾಹುಲ್ ಚಹರ್ಗೆ ಕ್ಯಾಚ್ ನೀಡಿ, ನಿರ್ಗಮಿಸಿದರು. 2013ರ ಬಳಿಕ ವಾರ್ನರ್ ಯಾವುದೇ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿರಲಿಲ್ಲ. ಆದರೆ, ಇಂದಿನ ಪಂದ್ಯದಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟ್ ಆದರು.