ಅಹಮದಾಬಾದ್ (ಗುಜರಾತ್): ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಯ 35 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ.
ಇದಕ್ಕೂ ಮುನ್ನ 2022ರಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸಿತ್ತು. ಈ ಬಾರಿ ಗುಜರಾತ್ ಟೈಟಾನ್ಸ್ ತಂಡ ಕಳೆದ ವರ್ಷ ಪಡೆದ ಸೋಲಿಗೆ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಲಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ ಫೈಟ್ ನೀಡಲು ಚಿಂತಿಸುತ್ತಿದೆ. ಐಪಿಎಲ್‌ನಲ್ಲಿ ಇದುವರೆಗೆ ಆಡಿದ 6 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ 4 ಪಂದ್ಯಗಳನ್ನು ಗೆದ್ದು ಒಟ್ಟು 8 ಅಂಕಗಳನ್ನು ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡವು ಕೇವಲ 3 ಪಂದ್ಯಗಳನ್ನು ಗೆದ್ದಿದ್ದು, 6 ಅಂಕಗಳಿಂದ ಏಳನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ವಿರುದ್ಧ 13 ರನ್ನಿಂದ ಸೋತಿತ್ತು. ಈ ಸೋಲಿನೊಂದಿಗೆ ಕಳೆದ 3 ಪಂದ್ಯಗಳಿಂದ ನಿರಂತರವಾಗಿ ಸಾಗುತ್ತಿದ್ದ ಮುಂಬೈ ಇಂಡಿಯನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳಲು ಸಜ್ಜಾಗುತ್ತಿದೆ. ಗುಜರಾತ್ ಟೈಟಾನ್ಸ್ ತಂಡವು ಕಳೆದ ಪಂದ್ಯದಲ್ಲಿ 7 ರನ್‌ಗಳಿಂದ ಲಕ್ನೋ ಸೂಪರ್‌ಜೈಂಟ್ಸ್ ಅನ್ನು ಸೋಲಿಸಿತು. ಕೊನೆಯ ಓವರ್ ವರೆಗೂ ನಡೆದ ಈ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬೌಲರ್ಗಳು ಅಮೋಘ ಬೌಲಿಂಗ್ ಪ್ರದರ್ಶಿಸಿ ಗೆದ್ದುಕೊಂಡಿತ್ತು. ಇಂದು ಅದೇ ಫಾರ್ಮ್ನ್ನು ಮುಂದುವರೆಸಲು ಪಾಂಡ್ಯ ಪಡೆ ಅಣಿಯಾಗಿದೆ.