ಮುಂಬೈ:ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ ಮತ್ತು ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಮುಗಿದ ನಂತರ ಮುಂಬೈ ಸೇರಿದ್ದಾರೆ.
ಮುಂಬೈ ಇಂಡಿಯನ್ಸ್ ಈ ಮೂವರು ಆಟಗಾರರು ಮುಂಬೈಗೆ ಆಗಮಿಸುವ ವಿಡಿಯೋವನ್ನು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ. ಈ ಸರಣಿಯಲ್ಲಿ ಕ್ರುನಾಲ್ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಆದರೆ ಸೂರ್ಯಕುಮಾರ್ ಯಾದವ್ಗೆ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಸೂರ್ಯಕುಮಾರ್ ಟಿ - 20 ಸರಣಿಯ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು.