ಮುಂಬೈ (ಮಹಾರಾಷ್ಟ್ರ): ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2023 ರ 43 ನೇ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರು ಬಲ ತೊಡೆಯ ಗಾಯಕ್ಕೆ ತುತ್ತಾದರು. ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ, ರಾಹುಲ್ ಅವರಿಗೆ ಆದಷ್ಟು ಬೇಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಲಾಗಿದೆ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಮಾಡಲು ನಿರ್ಧರಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಿಂದ ಅವರು ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಜಯದೇವ್ ಉನದ್ಕತ್ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವಾಗ ಸೈಡ್ ರೋಪ್‌ನಿಂದ ಮುಗ್ಗರಿಸಿ ಎಡ ಭುಜಕ್ಕೆ ಗಾಯವಾಯಿತು. ತಜ್ಞರ ಸಮಾಲೋಚನೆಯ ಮಾಡಲಾಗುತ್ತಿದೆ. ಎಡಗೈ ವೇಗದ ಬೌಲರ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಭುಜದ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಅವರು ಭಾಗವಹಿಸುವ ಬಗ್ಗೆ ಮುಂದಿನ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.
ಉಮೇಶ್ ಯಾದವ್ ಮೇಲೆ ಬಿಸಿಸಿಐ ನಿಗಾ:ಏಪ್ರಿಲ್ 26 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಐಪಿಎಲ್ನ 36ನೇ ಪಂದ್ಯದ ಸಮಯದಲ್ಲಿ ಉಮೇಶ್ ಯಾದವ್ ಎಡ ಮಂಡಿರಜ್ಜು ಗಾಯವನ್ನು ಅನುಭವಿಸಿದರು. ವೇಗದ ಬೌಲರ್ ಪ್ರಸ್ತುತ ಕೋಲ್ಕತ್ತಾ ನೈಟ್ ರೈಡರ್ಸ್ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ. ಅವರ ಪುನರ್ವಸತಿ ಪ್ರಕ್ರಿಯೆಯ ಭಾಗವಾಗಿ ಕಡಿಮೆ ವೇಗದ ಬೌಲಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಕೆಕೆಆರ್ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಉಮೇಶ್ ಅವರ ಆರೋಗ್ಯದ ಮೇಲೆ ನಿಕಟವಾಗಿ ಗಮನ ಇರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೇಸ್ನಲ್ಲಿದ್ದ ಆಟಗಾರರಿವರು:ಕೆಎಲ್ ರಾಹುಲ್ ಟೆಸ್ಟ್ ಚಾಂಪಿಯನ್ಶಿಪ್ನಿಂದ ಹೊರಕ್ಕೆ ಎಂಬ ಸುದ್ದಿ ಬರುತ್ತಿದ್ದಂತೆ ಆ ಸ್ಥಾನಕ್ಕೆ ಕೆಲ ಹೆಸರುಗಳು ಕೇಳಿಬಂದವು. ಐಪಿಎಲ್ನಲ್ಲಿ ರಾಜಸ್ಥಾನ ಮುನ್ನಡೆಸುತ್ತಿರುವ ಸಂಜು ಸ್ಯಾಮ್ಸನ್, ಅಭಿಮನ್ಯು ಈಶ್ವರನ್ ಹಾಗೂ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಹೆಸರೂ ಕೇಳಿಬಂದಿತ್ತು. ಇವರ ಜೊತೆಗೆ ಇಶಾನ್ ಕಿಶನ್ಗೆ ಅವಕಾಶ ಹೆಚ್ಚಿದೆ ಎಂದು ಹೇಳಲಾಗಿತ್ತು.