ಚೆನ್ನೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವೈಯಕ್ತಿಕ ಕಾರಣಗಳನ್ನು ನೀಡಿ ಈ ಬಾರಿಯ ಐಪಿಎಲ್ನಿಂದ ಹೊರ ನಡೆದಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಅವರು ತಮ್ಮ ಅಧಿಕೃತ ಟ್ವಿಟರ್ನಲ್ಲಿ ಈ ಬಗ್ಗೆ ತಿಳಿಸಿದ್ದಾರೆ.
"ನಾನು ಈ ವರ್ಷದ ಐಪಿಎಲ್ನಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಕುಟುಂಬ ಸದಸ್ಯರು ಕೋವಿಡ್-19 ವಿರುದ್ಧ ಹೋರಾಡುತ್ತಿದ್ದು, ಈ ಸಮಯದಲ್ಲಿ ನಾನು ಅವರ ಜೊತೆ ಕಾಲ ಕಳೆಯಲು ಮತ್ತು ಅವರಿಗೆ ಧೈರ್ಯ ತುಂಬಲು ಜೊತೆ ಇರಬೇಕಾಗಿದೆ. ಎಲ್ಲವೂ ಸರಿ ಹೋದರೆ ಮತ್ತೆ ನಾನು ತಂಡಕ್ಕೆ ಮರಳುತ್ತೇನೆ" ಎಂದು ಅಶ್ವಿನ್ ಟ್ವೀಟ್ ಮಾಡಿದ್ದಾರೆ.