ನವದೆಹಲಿ: ಸತತ ಸೋಲಿನಿಂದ ಕಂಗೆಟ್ಟಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಕೊನೆಯಲ್ಲಿದೆ. ಈ ತಂಡಕ್ಕೆ ಗೆಲುವು ಅನಿವಾರ್ಯವಾಗಿದ್ದು, ಇಂದಿನ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ.
ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಿ ಹೈದರಾಬಾದ್ ತಂಡ ಆ ಜವಾಬ್ದಾರಿಯನ್ನು ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ಗೆ ವಹಿಸಿತ್ತು. ಆದರೂ ಕೂಡಾ ತಂಡದ ಅದೃಷ್ಟ ಮಾತ್ರ ಬದಲಾಗಲಿಲ್ಲ.
ಹೈದರಾಬಾದ್ ತಂಡ ಉತ್ತಮ ಬ್ಯಾಟಿಂಗ್ ಲೈನ್ಅಪ್ ಹೊಂದಿದೆ. ಆದರೆ ಇವರಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರುತ್ತಿಲ್ಲ. ಜಾನಿ ಬೈಸ್ಟೋ, ಡೇವಿಡ್ ವಾರ್ನರ್ ಉತ್ತಮ ಓಪನಿಂಗ್ ನೀಡುತ್ತಿದ್ದು, ಮಧ್ಯಮ ಕ್ರಮಾಂಕದಲ್ಲಿ ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್ ಸಾಥ್ ನೀಡುತ್ತಿದ್ದಾರೆ. ಆದರೆ ಅಂತಿಮ ಓವರ್ಗಳಲ್ಲಿ ಯಾವೊಬ್ಬ ಆಟಗಾರ ಕೂಡಾ ಬ್ಯಾಟಿಂಗ್ನಲ್ಲಿ ಅಬ್ಬರಿಸುತ್ತಿಲ್ಲ. ಇದೇ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ರಶೀದ್ ಖಾನ್ ತಂಡಕ್ಕೆ ಬಲ ತುಂಬಿದ್ದಾರೆ. ಆದರೆ ಉಳಿದವರಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ.
ಇನ್ನು ಮುಂಬೈ ತಂಡದ ಕಳೆದ ಪಂದ್ಯವನ್ನು ಗಮನಿಸಿದರೆ ತಂಡ ಉತ್ತಮ ಲಯಕ್ಕೆ ಮರಳಿದೆ ಎನ್ನಬಹುದು. ಆರಂಭಿಕ ಡಿಕಾಕ್ ಫಾರ್ಮ್ ಕಂಡುಕೊಂಡಿದ್ದಾರೆ. ಬೌಲಿಂಗ್ ವಿಭಾಗವಂತೂ ಟೂರ್ನಿಯಲ್ಲೇ ಬಲಿಷ್ಠವಾಗಿದೆ. ಹಾರ್ದಿಕ್ ಪಾಂಡ್ಯ ಹೊರತುಪಡಿಸಿದರೆ ಉಳಿದೆಲ್ಲಾ ಆಟಗಾರರು ಅತ್ಯುತ್ತಮ ಲಯದಲ್ಲಿದ್ದು, ಇಂದು ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಮುಂಬೈ ಗೆಲುವಿನ ಹೀರೋ ಆಗಿದ್ದ ಕೀರನ್ ಪೊಲಾರ್ಡ್ ಉತ್ತಮ ಫಾರ್ಮ್ನಲ್ಲಿದ್ದು, ಇಂದಿನ ಪಂದ್ಯದಲ್ಲಿ ಅವರತ್ತ ಎಲ್ಲರ ಗಮನ ನೆಟ್ಟಿದೆ.
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: