ದುಬೈ :ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕರಾಗಿ ಕಣಕ್ಕಿಳಿದ ಯಂಗ್ ಪ್ಲೇಯರ್ ಋತುರಾಜ್ ಗಾಯಕ್ವಾಡ್ 32ರನ್ಗಳಿಕೆ ಮಾಡುವ ಮೂಲಕ ಹೊಸದೊಂದು ದಾಖಲೆ ಬರೆದರು.
14ನೇ ಆವೃತ್ತಿ ಐಪಿಎಲ್ನಲ್ಲಿ ಹೆಚ್ಚಿನ ರನ್ಗಳಿಕೆ ಮಾಡುವ ಮೂಲಕ ಆ್ಯರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಂಗ್ ಪ್ಲೇಯರ್ ಋತುರಾಜ್ ಗಾಯಕ್ವಾಡ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.
ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಮಿಂಚಿದ ಡುಪ್ಲೆಸಿ-ಗಾಯಕ್ವಾಡ್ ಜೋಡಿ ಈ ಆವೃತ್ತಿಯಲ್ಲಿ 626 ರನ್ಗಳಿಕೆ ಮಾಡುವ ಮೂಲಕ ಕನ್ನಡಿಗ ಕೆ.ಎಲ್ ರಾಹುಲ್ ಆರೆಂಜ್ ಕ್ಯಾಪ್ ತಮ್ಮ ಬಳಿ ಉಳಿಸಿಕೊಂಡಿದ್ದರು. ಆದರೆ, ಇವರ ನಂತರದ ಸ್ಥಾನದಲ್ಲಿದ್ದ ಯಂಗ್ ಪ್ಲೇಯರ್ ಋತುರಾಜ್ ಗಾಯಕ್ವಾಡ್ ಕೇವಲ 24 ರನ್ ಹಿನ್ನಡೆಯಲ್ಲಿದ್ದರು.
ಕೊನೆಯ ಪಂದ್ಯದಲ್ಲಿ ಬ್ಯಾಟ್ ಬೀಸಿದ ಗಾಯಕ್ವಾಡ್ 32 ರನ್ ಗಳಿಕೆ ಮಾಡುವ ಮೂಲಕ 635 ರನ್ ಗಳಿಸಿ ಐಪಿಎಲ್ನಲ್ಲಿ ವೈಯಕ್ತಿಕವಾಗಿ ಅತಿ ಹೆಚ್ಚು ರನ್ಗಳಿಸಿರುವ ಪ್ಲೇಯರ್ ಆಗಿ ಹೊರ ಹೊಮ್ಮಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಶಿಖರ್ ಧವನ್ 587ರನ್ ಗಳಿಸಿದ್ರೇ, ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿ ಇದ್ದಾರೆ.
ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಜೊತೆಯಾಗಿ ಕಣಕ್ಕಿಳಿಯುತ್ತಿದ್ದ ಡುಪ್ಲೆಸಿ ಹಾಗೂ ಗಾಯಕ್ವಾಡ್ ಒಟ್ಟು 756 ರನ್ಗಳ ಜೊತೆಯಾಟ ನೀಡಿದ್ದಾರೆ. ಈ ಟೂರ್ನಿಯಲ್ಲಿ ಹೆಚ್ಚಿನ ರನ್ಗಳಿಸಿರುವ ಪ್ಲೇಯರ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಟಾಸ್ ಗೆದ್ದಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ನಡೆಸಿದೆ.