ನವದೆಹಲಿ: 2021ರ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಅಗ್ರಸ್ಥಾನ ಕಾಯ್ದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ದ್ವಿತಿಯಾರ್ಧದ ಐಪಿಎಲ್ನಲ್ಲಿ ಪಾಲ್ಗೊಳ್ಳುವುದಕ್ಕಾಗಿ ಶನಿವಾರ ದುಬೈಗೆ ತೆರಳಿದೆ. ಮೊದಲ ಹಂತವಾಗಿ ಡೊಮೆಸ್ಟಿಕ್ ಕ್ರಿಕೆಟಿಗರು ಮತ್ತು ತಂಡದ ಸಹಾಯಕ ಸಿಬ್ಬಂದಿ ಇಂದು ದುಬೈಗೆ ತೆರಳಿದ್ದಾರೆ.
ನವದೆಹಲಿಯ ಇಂದಿರಾಗಾಂದಿ ವಿಮಾನ ನಿಲ್ದಾಣದಿಂದ ದುಬೈಗೆ ತೆರಳುತ್ತಿರುವ ವಿಡಿಯೋವನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ. ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಕೂಡ ಪಿಪಿಇ ಕಿಟ್ ಧರಿಸಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, 'ದುಬೈನತ್ತ ಪಯಣ' ಎಂದು ಬರೆದುಕೊಂಡಿದ್ದಾರೆ.
ದೆಹಲಿ ತಂಡದ ಶ್ರೇಯಸ್ ಅಯ್ಯರ್ ಈಗಾಗಲೇ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಜೊತೆಗೆ ದುಬೈಗೆ ತೆರಳಿದ್ದಾರೆ. ಅವರು ಐಸಿಸಿ ಅಕಾಡೆಮಿಯಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.