ಶಾರ್ಜಾ :14ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ತಂಡ ಮುಖಾಮುಖಿಯಾಗಿವೆ. ಶಾರ್ಜಾ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ. ಟಾಸ್ ಗೆದ್ದಿರುವ ಮಾರ್ಗನ್ ನೇತೃತ್ವದ ಕೋಲ್ಕತ್ತಾ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಸುನಿಲ್ ನರೈನ್ ಅವರ ಆಲ್ರೌಂಡರ್ ಆಟದಿಂದ ಆರ್ಸಿಬಿ ವಿರುದ್ಧ ಗೆಲುವು ಸಾಧಿಸಿರುವ ಕೋಲ್ಕತ್ತಾ, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ 3ನೇ ಸಲ ಫೈನಲ್ಗೆ ಲಗ್ಗೆ ಹಾಕುವ ಕನಸು ಕಾಣುತ್ತಿದೆ. ಆದರೆ, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡಿರುವ ಡೆಲ್ಲಿ ಇಂದಿನ ಪಂದ್ಯ ಗೆದ್ದು ಫೈನಲ್ ತಲುಪುವ ನಿರೀಕ್ಷೆಯಲ್ಲಿದೆ.
ಆಡುವ 11ರ ಬಳಗ ಇಂತಿದೆ