ಮುಂಬೈ :ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಇಂದು ಲೀಗ್ನ ಕೊನೆಯ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಕಳೆದ 27 ಪಂದ್ಯಗಳಿಂದ ಬೆಂಚ್ ಕಾಯುತ್ತಿರುವ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವುದೇ ಎಂಬ ಕುತೂಹಲ ಮೂಡಿದೆ.
ಕಳೆದ ವರ್ಷದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮೂಲ ಬೆಲೆ 30 ಲಕ್ಷ ರೂಪಾಯಿಗೆ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದ ಅರ್ಜುನ್ ತೆಂಡೂಲ್ಕರ್ಗೆ ಯಾವುದೇ ಅವಕಾಶ ಸಿಕ್ಕಿರಲಿಲ್ಲ. ಈ ಸಲದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಮೂಲ ಬೆಲೆಗೆ ಮುಂಬೈ ಬಳಗ ಸೇರಿಕೊಂಡಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮಗ ಅರ್ಜುನ್, ಕೇವಲ ನೆಟ್ನಲ್ಲಿ ಅಭ್ಯಾಸ ಮಾಡಿದ್ದು, ಈವರೆಗೆ ಯಾವುದೇ ಪಂದ್ಯದಲ್ಲಿ ಚಾನ್ಸ್ ಸಿಕ್ಕಿಲ್ಲ.
ಈಗಾಗಲೇ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡ ಇಂದಿನ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. 22 ವರ್ಷದ ಎಡಗೈ ವೇಗದ ಬೌಲರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್ನಲ್ಲೂ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದು, ತಮ್ಮ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಇದನ್ನೂ ಓದಿ:ಮುಂಬೈ ತಂಡಕ್ಕೆ ನಮ್ಮ ಸಪೋರ್ಟ್.. 'ಪ್ರೊಫೈಲ್ ಲೋಗೋ' ಕಲರ್ ಕೂಡ ಬದಲಿಸಿದ ಆರ್ಸಿಬಿ
ಕಳೆದ ಕೆಲ ದಿನಗಳ ಹಿಂದೆ ನೆಟ್ಸ್ನಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಅತ್ಯದ್ಭುತ ಯಾರ್ಕರ್ ಎಸೆಯುವ ಮೂಲಕ ಇಶಾನ್ ಕಿಶನ್ ಅವರನ್ನ ಕ್ಲೀನ್ ಬೌಲ್ಡ್ ಮಾಡಿದ್ದ ಅರ್ಜುನ್ ಅನೇಕರ ಗಮನ ಸೆಳೆದಿದ್ದರು. ಆದರೂ ಕೂಡ ಇವರಿಗೆ ಅವಕಾಶ ಮಾತ್ರ ಸಿಕ್ಕಿಲ್ಲ.