ದುಬೈ:ಚುಟುಕು ಕ್ರಿಕೆಟ್ ಐಪಿಎಲ್ನ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಮೊದಲ ಪಂದ್ಯದಲ್ಲಿ ಚೆನ್ನೈ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯಾ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಇದು ಮುಂಬೈ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಕಿರಣ್ ಪೋಲಾರ್ಡ್ ಇಂದು ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದಾರೆ.