ನವದೆಹಲಿ:ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾಗಿಂತಲೂ ಕನ್ನಡಿಗ ಕೆ.ಎಲ್ ರಾಹುಲ್ ಬಳಿ ಹೆಚ್ಚಿನ ಸಾಮರ್ಥ್ಯವಿದೆ ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಕೆ.ಎಲ್ ರಾಹುಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಏಕಾಂಗಿಯಾಗಿ ಕೇವಲ 42 ಎಸೆತಗಳಲ್ಲಿ ಅಜೇಯ 98ರನ್ಗಳಿಕೆ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಇದರ ಬಗ್ಗೆ ಮಾತನಾಡಿರುವ ಗೌತಮ್ ಗಂಭೀರ್, 29 ವರ್ಷದ ರಾಹುಲ್, ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗಿಂತಲೂ ಹೆಚ್ಚಿನ ಸಾಮರ್ಥ್ಯ ಹೊಂದಿದ್ದಾರೆ. ಐಪಿಎಲ್ ಅಭಿಯಾನದ ಉದ್ದಕ್ಕೂ ಅವರ ಬ್ಯಾಟಿಂಗ್ ಪ್ರದರ್ಶನ ಉತ್ತಮವಾಗಿದ್ದು, ಅವರಲ್ಲಿ ಇತರರಿಗಿಂತಲೂ ಹೆಚ್ಚಿನ ಹೊಡೆತ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ.ಅನೇಕ ಪಂದ್ಯಗಳಲ್ಲಿ ಅದನ್ನ ಕನ್ನಡಿಗ ರಾಹುಲ್ ಸಾಬೀತುಪಡಿಸಿದ್ದಾರೆಂದು ತಿಳಿಸಿದ್ದಾರೆ.