ಕರ್ನಾಟಕ

karnataka

ETV Bharat / sports

196ನೇ ಪಂದ್ಯದಲ್ಲಿ 'ವಿರಾಟ' ಪರ್ವ: 6,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಕೊಹ್ಲಿ - IPL history

ಐಪಿಎಲ್​ ಇತಿಹಾಸದಲ್ಲಿ 6,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ರಾಜಸ್ಥಾನ ವಿರುದ್ಧ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ವಿರಾಟ್​ನ 196ನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಸಾಧನೆ ಮಾಡಿದ್ದಾರೆ.

Kohli
ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ

By

Published : Apr 23, 2021, 7:16 AM IST

Updated : Apr 23, 2021, 8:22 AM IST

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 6,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಭಾರತ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 5,949 ರನ್ ಗಳಿಸಿದ್ದರು. ಬಳಿಕ ನಿನ್ನೆ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 72 ರನ್ ಬಾರಿಸಿದರು. ಈ ಮೂಲಕ 6 ಸಾವಿರ ರನ್‌ಗಳ ಗಡಿಯನ್ನು ದಾಟಿದ್ದಾರೆ. ಆರ್​ಸಿಬಿ ನಾಯಕನ ಈ ಸಾಧನೆಗಾಗಿ 188 ಇನ್ನಿಂಗ್ಸ್​ ತೆಗೆದುಕೊಂಡಿದ್ದಾರೆ.

ಇನ್ನು ವಿರಾಟ್​ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಪ್ರಥಮ ಬಾರಿಗೆ ದಾಖಲೆ ಬರೆದಿದ್ದಾರೆ. ಐಪಿಎಲ್​ನಲ್ಲಿ 6 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಇದನ್ನು ಓದಿ: ಕನ್ನಡಿಗ ಪಡಿಕ್ಕಲ್‌, ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಆರ್‌ಆರ್‌ ವಿರುದ್ಧ ಆರ್‌ಸಿಬಿಗೆ 10 ವಿಕೆಟ್‌ಗಳ ಭರ್ಜರಿ ಗೆಲುವು

ರಾಜಸ್ಥಾನ ವಿರುದ್ಧ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ಕೊಹ್ಲಿಯ 196ನೇ ಪಂದ್ಯವಾಗಿತ್ತು. ಅವರು ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 500 ಬೌಂಡರಿ ಮತ್ತು 200ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Last Updated : Apr 23, 2021, 8:22 AM IST

ABOUT THE AUTHOR

...view details