ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಪದೇ ಪದೇ ಗಾಯಗೊಳ್ಳುತ್ತಿದ್ದಾರೆ. ಒಂದೆಡೆ ಟೀಂ ಇಂಡಿಯಾಕ್ಕೆ ತಲೆನೋವಾದರೆ, ಮತ್ತೊಂದೆಡೆ ಐಪಿಎಲ್ ದೃಷ್ಟಿಯಿಂದ ಕೋಲ್ಕತ್ತಾ ನೈಟ್ ರೈಡರ್ಸ್‌ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಿದೆ.
ಹೊಸ ನಾಯಕನ ಹುಡುಕಾಟ ಜೋರು:ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್- 2023 ಸೀಸನ್‌ಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಈ ಪರಿಸ್ಥಿತಿಯಲ್ಲಿ ಅವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತಮಗಾಗಿ ಹೊಸ ನಾಯಕನನ್ನು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ.
ಸಂಪೂರ್ಣ ಫಿಟ್ ಆಗಿಲ್ಲ ಈ ಮೂವರು ಆಟಗಾರರು:ಟೀಂ ಇಂಡಿಯಾದ ಇಬ್ಬರು ಆಟಗಾರರಾದ ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತೆ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದಾರೆ. ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ ಹಾಗೂ ಅವರು ಮುಂಬರುವ ಕ್ರಿಕೆಟ್ ಪಂದ್ಯಾವಳಿಗಳನ್ನು ದೀರ್ಘ ಕಾಲದವರೆಗೆ ಕಳೆದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಆರಂಭಿಕ ಹಲವು ಪಂದ್ಯಗಳಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಆಡುವ ಸಾಧ್ಯತೆ ಕಡಿಮೆಯಿದೆ.
ಅವರು ಸಂಪೂರ್ಣ ಫಿಟ್ ಆಗದಿದ್ದರೆ, ಐಪಿಎಲ್‌ನಲ್ಲಿ ಯಾವುದೇ ಪಂದ್ಯವನ್ನು ಆಡುವ ಸಂಭವ ಕಡಿಮೆಯಿದೆ. ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿರುವ ಐಪಿಎಲ್‌ನಿಂದ ದೂರ ಉಳಿಯುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಪಂದ್ಯಗಳಿಗೆ ಹೊಸ ನಾಯಕನನ್ನು ಹುಡುಕಬೇಕಾಗಬಹುದು ಅಥವಾ ಶ್ರೇಯಸ್ ಅಯ್ಯರ್ ಇಲ್ಲದೆ ಇಡೀ ಐಪಿಎಲ್ ಅನ್ನು ಆಡಬೇಕಾಗಬಹುದು.