ಹೈದರಾಬಾದ್ : ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಆಟಗಾರರು, ಸಿಬ್ಬಂದಿ ವರ್ಗಕ್ಕೆ ಕೊರೊನಾ ಸೋಂಕು ತಗುಲಿರುವ ಕಾರಣ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಬಿಸಿಸಿಐ ರದ್ದು ಮಾಡಿ ಅನಿರ್ದಿಷ್ಟಾವಧಿಗೆ ಮೂಂದೂಡಿದೆ.
ಈ ಹಿನ್ನೆಲೆಯಲ್ಲಿ ಬಹುತೇಕ ವಿದೇಶಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಮಾಲ್ಡೀವ್ಸ್‌ಗೆ ಪ್ರಯಾಣ ಬೆಳೆಸಿ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಹಾಗೂ ಕಾಮೆಂಟೇಟರ್ ಕೆವಿನ್ ಪೀಟರ್ಸನ್ ಕೂಡ ಮಾಲ್ಡೀವ್ಸ್‌ನಲ್ಲಿದ್ದಾರೆ.