ಲಕ್ನೋ (ಉತ್ತರ ಪ್ರದೇಶ): ಇಂಡಿಯನ್ ಪ್ರೀಮಿಯರ್ ಲೀಗ್‌ನ 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪೈಪೋಟಿ ನಡೆಸಲಿದೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ತಂಡ ಗೆದ್ದರೆ ಪ್ಲೇ ಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಲಕ್ನೋ ಸೂಪರ್ ಜೈಂಟ್ಸ್ ಗೆದ್ದಲ್ಲಿ ಪ್ಲೇ ಆಫ್‌ಗೆ ಪ್ರವೇಶಕ್ಕೆ ಒಂದು ಹೆಜ್ಜೆ ಬಾಕಿ ಇರುತ್ತದೆ.
ಸೋಮವಾರ ನಡೆದ ಪಂದ್ಯದಲ್ಲಿ ಗೆದ್ದ ಗುಜರಾತ್ ಟೈಟಾನ್ಸ್ ಪ್ಲೇಆಫ್ ಪ್ರವೇಶ ಪಡೆದುಕೊಂಡಿದೆ. ಅತ್ತ ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಲೀಗ್ನಿಂದ ಹೊರಬಿದ್ದಿವೆ. ಮಿಕ್ಕ ಏಳು ತಂಡಗಳಲ್ಲಿ ಪ್ಲೇ ಆಫ್ ಪ್ರವೇಶಕ್ಕೆ ಜೋರಿನ ಹಣಾಹಣಿ ನಡೆಯುತ್ತಿದೆ. ಇಂದಿನ ಲಕ್ನೋ ಮುಂಬೈ ಪಂದ್ಯವೂ ಸಹ ಇದೇ ಉಭಯ ತಂಡಗಳಿಗೆ ಮಹತ್ವದ್ದಾಗಿದೆ.
ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದು 14 ಅಂಕ ಗಳಿಸಿದೆ. ಇಂದಿನ ಪಂದ್ಯವನ್ನು ಗೆದ್ದ ನಂತರ, ಅವರು 16 ಅಂಕಗಳನ್ನು ಹೊಂದಿರುತ್ತಾರೆ ಮತ್ತು ಅವರು ಪ್ಲೇ-ಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಆಡಿರುವ 12 ಪಂದ್ಯದಲ್ಲಿ 6 ರಲ್ಲಿ ಗೆದ್ದಿದ್ದು ಒಂದು ರದ್ದಾದ ಹಿನ್ನೆಲೆ 13 ಅಂಕದಿಂದ ಸದ್ಯ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಲಕ್ನೋ ಸನ್ ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ದಾಖಲಿಸಿದ್ದು, ಇಂದು ಅದೇ ಆತ್ಮವಿಶ್ವಾದಲ್ಲಿ ತವರು ಮೈದಾನದಲ್ಲಿ ಕಣಕ್ಕಿಳಿಯುತ್ತಿದೆ. ಮುಂಬೈ ಸಹ ಕಳೆದೆರಡು ಪಂದ್ಯದಲ್ಲಿ ಬೃಹತ್ ಸ್ಕೋರ್ನ್ನ ಉತ್ತಮವಾಗಿ ಬೆನ್ನು ಹತ್ತಿದೆ. ಮುಂಬೈಗೆ ಸೂರ್ಯ ಕುಮಾರ್ ಯಾದವ್ ಕಳೆದೆರಡು ಪಂದ್ಯದಿಂದ ಆಸರೆಯಾಗಿದ್ದು, ಆಂಭದಲ್ಲಿ ಪ್ಲೇ ಸತತ ಸೋಲು ಕಂಡಿದ್ದ ತಂಡ ಪ್ಲೇ ಆಫ್ ಪ್ರವೇಶಕ್ಕೆ ಒಂದು ಗೆಲುವನ್ನು ಎದುರು ನೋಡುತ್ತಿದೆ.