ಚೆನ್ನೈ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿದೆ.
ವೈದ್ಯಕೀಯ ಪರೀಕ್ಷೆ ವೇಳೆ ಹೃದಯದ ಸಮಸ್ಯೆ ಇರುವುದು ಪತ್ತೆಯಾಗಿದ್ದು, ವೈದ್ಯರು ಅವರಿಗೆ ಹೃದಯದ ಸ್ಟೆಂಟ್ ಅಳವಡಿಸಿದ್ದಾರೆ.
ಮುರಳೀಧರನ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಾಯಕ ಸಿಬ್ಬಂದಿಯೂ ಆಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಹೃದಯದ ಭಾಗದಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಪಿಎಲ್ ಮೂಲಗಳು ತಿಳಿಸಿವೆ.