ಇಸ್ಲಾಮಾಬಾದ್:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಜಮ್ಮು- ಕಾಶ್ಮೀರ ವೇಗದ ಬೌಲರ್ ಉಮ್ರಾನ್ ಮಲಿಕ್ ಬಗ್ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ. ಆದರೆ, ಅವರ ಬೌಲಿಂಗ್ ಶೈಲಿ ಬಗ್ಗೆ ಪಾಕಿಸ್ತಾನದ ವೇಗದ ಬೌಲರ್ ಮಾತನಾಡಿದ್ದು, ಸ್ಪೀಡ್ ಸೆ ಕುಚ್ ನಹೀ ಹೋತಾ(ವೇಗದಿಂದ ಏನು ಸಾಧ್ಯವಿಲ್ಲ) ಎಂದು ಹೇಳಿದ್ದಾರೆ.
ಪಾಕಿಸ್ತಾನದ ವೇಗಿ ಶಾಹಿನ್ ಅಫ್ರಿದಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಮಾತನಾಡಿದ್ದು, ಲೈನ್, ಲೆಂತ್ ಮತ್ತು ಸ್ವಿಂಗ್ ಇಲ್ಲದೇ ವೇಗವಾಗಿ ಬೌಲಿಂಗ್ ಮಾಡುವುದು ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.
ಇದನ್ನೂ ಓದಿ:IPLನಲ್ಲಿ ತಮ್ಮದೇ ದಾಖಲೆ ಬ್ರೇಕ್ ಮಾಡಿದ ಉಮ್ರಾನ್ ಮಲಿಕ್.. 157ಕಿ.ಮೀ ವೇಗದಲ್ಲಿ ‘ಜಮ್ಮು ಎಕ್ಸ್ಪ್ರೆಸ್’ ಬೌಲಿಂಗ್!
ಕಳೆದ ಕೆಲ ವರ್ಷಗಳಿಂದ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ, ಮೂರು ಮಾದರಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ತಮ್ಮ ಸ್ವಿಂಗ್ ಮತ್ತು ಉತ್ತಮ ಲೈನ್ನಿಂದಾಗಿ ಜಗತ್ತಿನಾದ್ಯಂತ ಅನೇಕ ಬ್ಯಾಟರ್ಗಳ ಪಾಲಿಗೆ ವಿಲನ್ ಆಗಿದ್ದಾರೆ. ಕೇವಲ ವೇಗವಾಗಿ ಬೌಲಿಂಗ್ ಎಸೆಯುವುದರಿಂದ ಯಾವುದೇ ಪ್ರಯೋಜನವಾಗಲ್ಲ. ನಮ್ಮಲ್ಲಿ ಉತ್ತಮ ಲೈನ್, ಲೆಂತ್ ಮತ್ತು ಸ್ವಿಂಗ್ ಇರಬೇಕು. ಇಲ್ಲದಿದ್ದರೆ ಎದುರಾಳಿ ಬ್ಯಾಟರ್ಗಳ ವಿಕೆಟ್ ಪಡೆದುಕೊಳ್ಳಲು ಸಾಧ್ಯವಾಗಲ್ಲ ಎಂದರು.
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿರುವ ಉಮ್ರಾನ್ ಮಲಿಕ್ 22 ವಿಕೆಟ್ ಪಡೆದು, ಗಮನ ಸೆಳೆದಿದ್ದಾರೆ. ಇದರ ಜೊತೆಗೆ ಪ್ರತಿ ಗಂಟೆಗೆ 157 ಕಿ. ಮೀ ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಐಪಿಎಲ್ನಲ್ಲಿ ಶರವೇಗದ ಬೌಲಿಂಗ್ ಮಾಡುವ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.