ನವದೆಹಲಿ: ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ 14ನೇ ಆವೃತ್ತಿಯ ದ್ವಿತೀಯಾರ್ಧದ ಐಪಿಎಲ್ಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಆಸ್ಟ್ರೇಲಿಯಾದ ಉದಯೋನ್ಮುಖ ವೇಗಿ ನೇಥನ್ ಎಲ್ಲಿಸ್ರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ದ್ವಿತೀಯಾರ್ಧದ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ದುಬಾರಿ ಬೆಲೆ ನೀಡಿ ತಂಡಕ್ಕೆ ಸೇರಿಸಿಕೊಂಡಿದ್ದ ಜೇ ರಿಚರ್ಡ್ಸನ್ ಮತ್ತು ರಿಲೀ ಮೆರಿಡಿತ್ ಸೌಲಭ್ಯವನ್ನು ಕಳೆದುಕೊಳ್ಳಲಿದೆ. ಹಾಗಾಗಿ, ಬದಲಿ ಆಟಗಾರನಾಗಿ ಎಲ್ಲಿಸ್‌ಗೆ ಮಣೆ ಹಾಕಿದೆ.
ಎಲ್ಲಿಸ್ ಇತ್ತೀಚೆಗೆ ಮುಕ್ತಾಯಗೊಂಡ ಬಾಂಗ್ಲಾದೇಶ ವಿರುದ್ಧ ಸರಣಿಯ ವೇಳೆ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿ, ಅದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ಇದರೊಂದಿಗೆ ಪದಾರ್ಪಣೆ ಪಂದ್ಯದಲ್ಲಿಯೇ ಈ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದರು.