ಹೈದರಾಬಾದ್: ಸೋಮವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೈಬೆರಳಿಗೆ ಗಾಯವಾಗಿ ರಾಜಸ್ಥಾನ ತಂಡದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್ನಿಂದ ಹೊರಹೋಗಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಪಂಜಾಬ್ ತಂಡದ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೊಡೆದ ಬಾಲ್ ಅನ್ನು ಅದ್ಭುತವಾಗಿ ಕ್ಯಾಚ್ ಮಾಡಿದ್ದರು. ಈ ವೇಳೆ ಅವರ ಕೈ ಬೆರಳಿಗೆ ತೀವ್ರ ತರಹದ ಪೆಟ್ಟಾಗಿತ್ತು. ಈಗ ಆ ಕೈಬೆರಳು ಮುರಿದಿದ್ದು ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆಯಿದೆ. ಹಾಗಾಗಿ ಟೂರ್ನಿಯಿಂದ ಇಂಗ್ಲೆಂಡ್ ಕ್ರಿಕೆಟಿಗ ಸಂಪೂರ್ಣವಾಗಿ ಹೊರನಡೆದಿದ್ದಾರೆ.
ಇದನ್ನೂ ಓದಿ: ಸೂರ್ಯಕುಮಾರ್ ಸಿಕ್ಸರ್ಗೆ ಶಾಕ್ ಆದ ಹಾರ್ದಿಕ್ ಪಾಂಡ್ಯ: ವಿಡಿಯೋ ನೋಡಿ