ನವದೆಹಲಿ:ಸೆ.19ರಿಂದ ಐಪಿಎಲ್ ಮತ್ತೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ದುಬೈಯಲ್ಲಿ ಅಭ್ಯಾಸ ನಡೆಸುತ್ತಿವೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡ ಎನಿಸಿರುವ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಕಠಿಣ ಅಭ್ಯಾಸದಲ್ಲಿ ತೊಡಗಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2ನೇ ಆವೃತ್ತಿಯ ಮೊದಲ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ನೀಲಿ ಜರ್ಸಿ ತೊಟ್ಟು ಮೈದಾನಕ್ಕಿಳಿಯಲಿದ್ದಾರೆ. ಈ ಮೂಲಕ, ಕೋವಿಡ್ ವಾರಿಯರ್ಸ್ಗೆ ವಿಶೇಷ ಗೌರವ ಸಲ್ಲಿಸಲಿದ್ದಾರೆ.
ಐಪಿಎಲ್ ಆರಂಭದ ವೇಳೆ ಆರ್‌ಸಿಬಿ ತಂಡ ನೀಲಿ ಜರ್ಸಿ ತೊಟ್ಟು ಮೈದಾನಕ್ಕಿಳಿಯಲು ನಿರ್ಧರಿಸಿತ್ತು. ಆದರೆ ಟೂರ್ನಿ ಅರ್ಧಕ್ಕೆ ಮೊಟಕುಗೊಂಡಿದ್ದರಿಂದ ಸಾಧ್ಯವಾಗಿರಲಿಲ್ಲ. ಇದೀಗ ದುಬೈನಲ್ಲಿ ಟೂರ್ನಿ ಮತ್ತೆ ಆರಂಭವಾಗುತ್ತಿದೆ. ವೈದ್ಯರು, ನರ್ಸ್, ಅಂಗನವಾಡಿ ಕಾರ್ಯಕರ್ತರು ಸೇರಿ ಎಲ್ಲಾ ಮುಂಚೂಣಿ ಕೋವಿಡ್ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ಟೀಂ ಮುಂದಾಗಿದೆ.