ವೆಲ್ಲಿಂಗ್ಟನ್(ನ್ಯೂಜಿಲ್ಯಾಂಡ್):ಸನ್ಸೈಸರ್ಸ್ ಹೈದರಾಬಾದ್ ತಂಡದ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ಪತ್ನಿ ಸಾರಾ ರಹೀಮ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಕೇನ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪತ್ನಿ ಸಾರಾ ರಹೀಮ್ ಹಾಗೂ ಮೊದಲ ಮಗಳೊಂದಿಗೆ ಈಗಷ್ಟೇ ಹುಟ್ಟಿರುವ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ. "Welcome to the whanau little man!'' ಎಂದು ಕೇನ್ ಬರೆದುಕೊಂಡಿದ್ದು, ಮುದ್ದಾದ ಗಂಡು ಮಗುವನ್ನ ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.
ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ಕೇನ್ ವಿಲಿಯಮ್ಸನ್ ಮೇ. 22ರಂದು ಆಯೋಜನೆಗೊಂಡಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯ ಆಡಿರಲಿಲ್ಲ. ಅದಕ್ಕೂ ಮುಂಚಿತವಾಗಿ ಅವರು ನ್ಯೂಜಿಲ್ಯಾಂಡ್ಗೆ ಪ್ರಯಾಣ ಬೆಳೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಫ್ರಾಂಚೈಸಿ ಟ್ವೀಟ್ ಮಾಡಿ, ಮಾಹಿತಿ ಹಂಚಿಕೊಂಡಿತ್ತು. ಹೀಗಾಗಿ, ಕೊನೆಯ ಪಂದ್ಯವನ್ನ ವೇಗಿ ಭುವನೇಶ್ವರ್ ಕುಮಾರ್ ಮುನ್ನಡೆಸಿದ್ದರು.