ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ನಾಯಕನಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಆಯ್ಕೆಯಾಗಿದ್ದು, ಇವರು ಮಾಂತ್ರಿಕ ನಾಯಕರಾಗಲಿದ್ದಾರೆ ಎಂದು ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಭುಜದ ಗಾಯಕ್ಕೆ ತುತ್ತಾಗಿದ್ದರು. ನಂತರ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದ ಅವರಿಗೆ ಸುಮಾರು 5 ರಿಂದ 6 ತಿಂಗಳ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ದೆಹಲಿ ತಂಡದ ಸಾರಥ್ಯ ರಿಷಭ್ ಪಂತ್ ಹೆಗಲೇರಿದೆ.